ಸೋಮವಾರ, ಜನವರಿ 25, 2021
19 °C

ಅತಿ ಶೀಘ್ರವೇ ಸಂಪುಟ ವಿಸ್ತರಣೆ: ಆರ್‌.ಶಂಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಇನ್ನು ಎರಡು ಮೂರು ದಿನಗಳಲ್ಲಿ ಮಂತ್ರಿ ಆಗುತ್ತೀಯ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದು, ಶೀಘ್ರವೇ ಸಂಪುಟ ವಿಸ್ತರಣೆ ಆಗುವುದು ಖಚಿತ’ ಎಂದು ವಿಧಾನಪರಿಷತ್‌ ಸದಸ್ಯ ಆರ್‌.ಶಂಕರ್‌ ಹೇಳಿದರು.

ಮಂಗಳವಾರ ಮುಖ್ಯಮಂತ್ರಿಯವರ ಭೇಟಿಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ಯಾವುದೇ ಕ್ಷಣದಲ್ಲೂ ಸಂಪುಟ ವಿಸ್ತರಣೆ ಆಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

‘ಯಡಿಯೂರಪ್ಪನವರ ಜತೆ ಉಪಹಾರ ಸೇವಿಸುವ ಸಂದರ್ಭದಲ್ಲಿ ಅವರು ಈ ವಿಚಾರ ತಿಳಿಸಿದರು. ಶಾಸಕ ಉಮೇಶ ಕತ್ತಿಯವರೂ ಇದ್ದರು’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು