ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೋವಿಡ್‌ನಿಂದ ನಿಧನ

Last Updated 14 ಮೇ 2021, 14:02 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ತಮ್ಮ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದ ಮಹದೇವ್ ಪ್ರಕಾಶ್ ಅವರ ನಿಧನಕ್ಕೆ ಟ್ವೀಟ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಖ್ಯಾತ ಲೇಖಕ, ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ನನ್ನ ಮಾಧ್ಯಮ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ. ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT