ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಮುಂದೂಡಿ'

Last Updated 30 ಸೆಪ್ಟೆಂಬರ್ 2020, 4:03 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮಾಂತರ ಪ್ರದೇಶಗಳಲ್ಲಿ ಅ.2ರಂದು ಹಮ್ಮಿಕೊಂಡಿರುವ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಮುಂದೂಡುವಂತೆ ಕರ್ನಾಟಕ ಪಶುವೈದ್ಯಕೀಯ ಸಂಘವುಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಗೆ ಮನವಿ ಮಾಡಿದೆ.

ಸಂಘದ ಅಧ್ಯಕ್ಷ ಎಸ್.ಸಿ.ಸುರೇಶ್, 'ರಾಜ್ಯದಲ್ಲಿ ಜಾನುವಾರುಗಳಿಗೆಈಗಾಗಲೇ ಚರ್ಮಗಂಟು ರೋಗ (ಎಲ್‍ಎಸ್‍ಡಿ) ವ್ಯಾಪಕವಾಗಿ ಹರಡಿದೆ. ತಜ್ಞರ ಅಭಿಪ್ರಾಯದಂತೆ ರೋಗ ಕಾಣಿಸಿಕೊಂಡ 5 ಕಿ.ಮೀ ವ್ಯಾಪ್ತಿಯಲ್ಲಿ ಎಲ್‍ಎಸ್‍ಡಿ ಲಸಿಕೆ ಹಾಕಬೇಕಿದೆ.ಇದೇ ವೇಳೆ ಕಾಲುಬಾಯಿ ಜ್ವರದ ಲಸಿಕೆ ಹಾಕುವುದರಿಂದ ಜಾನುವಾರುಗಳಿಗೆ ಅಡ್ಡಪರಿಣಾಮ ಉಂಟಾಗುತ್ತದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.

'ಇದರಿಂದ ರಾಸುಗಳ ಜೀವಕ್ಕೂ ಅಪಾಯ ಉಂಟಾಗಬಹುದು ಎಂದೂ ವಿಜ್ಞಾನಿಗಳು ಎಚ್ಚರಿಸಿದ್ದಾರೆ' ಎಂದುಸಂಘದ ಪ್ರಧಾನ ಕಾರ್ಯದರ್ಶಿ ಎ.ಡಿ.ಶಿವರಾಮ್ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT