ಮಂಗಳೂರು: ವಿಶ್ವ ಹಿಂದೂ ಪರಿಷತ್ ‘ಲವ್ ಜಿಹಾದ್’ ತಡೆಯುವ ಹೆಸರಿನಲ್ಲಿ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ.
‘ಸಾಕಷ್ಟು ಯುವತಿಯರು ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ ಹೋಗಿ ‘ಲವ್ ಜಿಹಾದ್’ನ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಬ್ಲಾಕ್‌ಮೇಲ್ ತಂತ್ರಕ್ಕೆ ಒಳಗಾಗಿ ನೂರಾರು ಹೆಣ್ಣು ಮಕ್ಕಳು ತಮ್ಮ ಜೀವನವನ್ನೇ ಕಳೆದು ಕೊಂಡಿದ್ದಾರೆ. ದೇಶದಲ್ಲಿ ಸಾಕಷ್ಟು ಹೆಣ್ಣುಮಕ್ಕಳು ಚಿತ್ರಹಿಂಸೆ ಅನುಭವಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಹೋದರಿಯರ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ್ದೇವೆ’ ಎಂದು ವಿಎಚ್‌ಪಿ ಜಿಲ್ಲಾ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಮನೆ, ನೆರೆಹೊರೆ, ಊರು ಹಳ್ಳಿಗಳಲ್ಲಿ ಇಂತಹ ಪ್ರಕರಣ ಕಂಡುಬಂದರೆ 9148658108ಗೆ ಕರೆ ಮಾಡಬಹುದು. ಅಥವಾ 9591658108 ಸಂಖ್ಯೆಗೆ ವಾಟ್ಸಾಪ್ ಮೂಲಕ ಮಾಹಿತಿ ನೀಡಬಹುದು’ ಎಂದು ಅವರು ಹೇಳಿದ್ದಾರೆ.
‘ಶಾಲೆ, ಕಾಲೇಜು, ಕ್ಯಾಂಪಸ್, ಕೆಲಸ ಮಾಡುವ ಸ್ಥಳಗಳಲ್ಲಿ ಯುವತಿಯರು ‘ಲವ್ ಜಿಹಾದ್’ಗೆ ಬಲಿಯಾಗುವ ಸಾಧ್ಯತೆ ಹೆಚ್ಚು. ಅವರ ಪೋಷಕರು ಲವ್ ಜಿಹಾದ್ ಬಗ್ಗೆ ಜಾಗ್ರತೆ ವಹಿಸಬೇಕು. ಈ ಬಗ್ಗೆ ಸಂಶಯವಿದ್ದಲ್ಲಿ ನಿಸ್ಸಂಕೋಚವಾಗಿ ಸಂಪರ್ಕಿಸಬಹುದು. ವಿವರ ಹಾಗೂ ಫೋಟೊಗಳನ್ನು ವಾಟ್ಸಾಪ್ ಮೂಲಕ ಕಳುಹಿಸಬಹುದು. ಮಾಹಿತಿಗಳನ್ನು ಗೌಪ್ಯವಾಗಿಡಲಾಗುವುದು. ಅಗತ್ಯವಿದ್ದಲ್ಲಿ ಕಾನೂನಿನ ಸಲಹೆಗಳನ್ನು ನೀಡಲಾಗುವುದು’ ಎಂದೂ ಅವರು ತಿಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.