‘ಆತ್ಮಹತ್ಯೆ ಯತ್ನಕ್ಕೆ ವಿಡಿಯೊ ಕಾರಣ’

ಕಾರವಾರ: ‘ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ವಿಡಿಯೊವೊಂದು ಕಾರಣ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಂತೋಷ್ ಯಾರದ್ದೋ ವೈಯಕ್ತಿಕ ವಿಡಿಯೊವನ್ನು ವಿಧಾನಪರಿಷತ್ ಸದಸ್ಯರೊಬ್ಬರಿಗೆ ಹಾಗೂ ಸಚಿವರಿಗೆ ಕೊಟ್ಟ ಮಾಹಿತಿ ಎರಡು ಮೂರು ತಿಂಗಳ ಹಿಂದೆ ಬಂದಿತ್ತು. ಅದನ್ನು ಮುಂದೆ ಇಟ್ಟುಕೊಂಡು ವಿಧಾನಪರಿಷತ್ ಸದಸ್ಯ, ಸಚಿವರು ಇಬ್ಬರೂ ಸೇರಿ ಮುಖ್ಯಮಂತ್ರಿ ಹಾಗೂ ಸಂತೋಷ್ಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಬಗ್ಗೆ ಕೇಳಿದ್ದೇನೆ. ಅದರ ಸತ್ಯಾಂಶವೇನೆಂದು ಗೊತ್ತಿಲ್ಲ’ ಎಂದರು.
ವಿಧಾನಪರಿಷತ್ ಸದಸ್ಯ ಮತ್ತು ಸಚಿವರು ಯಾರು ಎಂದು ಕೇಳಿದಾಗ ಶಿವಕುಮಾರ್ ಸ್ಪಷ್ಟಪಡಿಸಲಿಲ್ಲ.
ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣಗಳೇನು?
ಸಿದ್ದರಾಮಯ್ಯ ಅವರು ಡ್ರಗ್ ಮಾಫಿಯಾದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರೆಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿದ ಅವರು, ‘ಒಂದು ವೇಳೆ, ಮಾದಕ ದ್ರವ್ಯದ ಹಣದಿಂದ ಸರ್ಕಾರ ನಡೆಸಿದ್ದರೆ ಯಾಕೆ ಎಫ್ಐಆರ್ ದಾಖಲಿಸಿಲ್ಲ? ನಳಿನ್ ಕುಮಾರ್ಗೆ ಏನೋ ಹೆಚ್ಚು ಕಮ್ಮಿ ಆಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಬೇಕು’ ಎಂದು ವ್ಯಂಗ್ಯವಾಡಿದರು.
‘ಡಿಕೆಶಿಯದು ಮುಟ್ಠಾಳತನದ ಹೇಳಿಕೆ’
ಬೆಳಗಾವಿ: ‘ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವುದಕ್ಕೆ ವಿಡಿಯೊವೊಂದು ಕಾರಣ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಮುಟ್ಠಾಳತನದ್ದು’ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದರು.
ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜನರ ದಿಕ್ಕು ತಪ್ಪಿಸುವ ಹೇಳಿಕೆಯನ್ನು ಅವರು ನೀಡಿದ್ದಾರೆ. ಅಧಿಕಾರ ಕಳೆದುಕೊಂಡಿರುವ ಅವರು ಹತಾಶರಾಗಿದ್ದಾರೆ. ಹೀಗಾಗಿ ದಿನಕ್ಕೊಂಂದು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಯಾವುದೇ ಆರೋಪ ಮಾಡಿದರೂ ಅದಕ್ಕೆ ದಾಖಲೆಗಳಿರಬೇಕು. ಅದ್ಯಾವುದೋ ವಿಡಿಯೊ ಇರುವುದು ಗೊತ್ತಾಗಿದ್ದರೆ ಮೊದಲೇ ಯಾಕೆ ಹೇಳಲಿಲ್ಲ? ಹೇಳಿದ್ದರೆ ಆತ ಆತ್ಮಹತ್ಯೆಗೆ ಯತ್ನಿಸುವುದನ್ನು ತಡೆಯಬಹುದಿತ್ತು. ಸಾಯಲಿ ಅಂತ ಕಾಯುತ್ತಿದ್ದರಾ? ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಸಂತೋಷ್ಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವಿಧಾನಪರಿಷತ್ ಸದಸ್ಯರು, ಸಚಿವರು ಯಾರು ಎನ್ನುವುದನ್ನು ಬಹಿರಂಗಪಡಿಸಲಿ’ ಎಂದು ಸವಾಲೆಸಿದರು. .
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.