ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ ಉಪಚುನಾವಣೆ: ಬಾಬುರಾವ್‌ ಚಿಂಚನಸೂರು ಅವಿರೋಧ ಆಯ್ಕೆ

Last Updated 4 ಆಗಸ್ಟ್ 2022, 11:00 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಪರಿಷತ್ತಿನ ಒಂದು ಸ್ಥಾನದ ಉಪಚುನಾವಣೆಗೆ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ಬಾಬುರಾವ್‌ ಚಿಂಚನಸೂರುಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ನಾಮಪತ್ರ ಪಡೆಯಲು ಗುರುವಾರ ಕಡೆಯ ದಿನವಾಗಿತ್ತು.

ನಾಮಪತ್ರ ಹಿಂದಕ್ಕೆ ಪಡೆಯುವ ಸಮಯ ಮುಗಿಯುತ್ತಿದ್ದಂತೆ ಚಿಂಚನಸೂರುಅವಿರೋಧವಾಗಿ ಆಯ್ಕೆಯಾಗಿದ್ದಾರೆಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಚಿಂಚನಸೂರು ಅವರ ಸದಸ್ಯತ್ವದ ಅವಧಿ 2024 ರ ಜೂನ್‌ 17 ರವರೆಗೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT