ಮಂಗಳವಾರ, ಜೂನ್ 28, 2022
21 °C

ವಿಧಾನ ಪರಿಷತ್‌ ಚುನಾವಣೆ: ಏಳೂ ನಾಮಪತ್ರ ಕ್ರಮಬದ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಜೂನ್ 3ರಂದು ನಿಗದಿಯಾಗಿರುವ ಚುನಾವಣೆಗೆ ಸಲ್ಲಿಕೆಯಾಗಿರುವ ಎಲ್ಲ ಏಳೂ ನಾಮಪತ್ರಗಳು ಕ್ರಮಬದ್ಧವಾಗಿವೆ ಮತ್ತು ಅಂಗೀಕಾರಗೊಂಡಿವೆ. ಹೀಗಾಗಿ, ಮೂರು ಪಕ್ಷಗಳ (ಬಿಜೆಪಿಯ ನಾಲ್ವರು, ಕಾಂಗ್ರೆಸ್ಸಿನ ಇಬ್ಬರು, ಜೆಡಿಎಸ್‌ನ ಒಬ್ಬ) ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ನಿಚ್ಚಳವಾಗಿದೆ.

ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಅವರು, ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು