ಶಿಡ್ಲಘಟ್ಟ (ಚಿಕ್ಕಬಳ್ಳಾಪುರ): ‘ಚುನಾವಣಾ ಸಮಯದಲ್ಲಿಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜ್ವರ ಶುರುವಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿವೆ ಎಂದು ಅಪಪ್ರಚಾರ ಆರಂಭಿಸುತ್ತಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗುರುವಾರ ಲೇವಡಿ ಮಾಡಿದರು.

ತಾಲ್ಲೂಕಿನ ಮೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಂಗ್ರೆಸ್ ನಾಯಕರು ಒಳಒಪ್ಪಂದದ ಅಪಪ್ರಚಾರ ಮಾಡುತ್ತಾರೆ. ನಂತರ ಮರೆತು ಹೋಗುತ್ತಾರೆ. ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಿರುವ ಕಡೆ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ನಾವು ಅವರ ವಿರುದ್ಧವೂ ಹೋರಾಡಬೇಕಿದೆ’ ಎಂದು ಹೇಳಿದರು.

‘ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದರು. ಈಗ ಅವರ ಮಗನಿಗೆ ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಿದೆ. ಈಗ ಸಚಿವರಾಗಿರುವವರ ಆಪ್ತ ಸಹಾಯಕರಾಗಿದ್ದವರು ಈಗ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಇದು ಕಾಂಗ್ರೆಸ್, ಬಿಜೆಪಿ ನಡುವಣ ಹೊಂದಾಣಿಕೆ ತಿಳಿಸುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.