ಪರಿಷತ್ ಚುನಾವಣೆ: ವಿಜಯೇಂದ್ರಗೆ ಟಿಕೆಟ್ ನಿರಾಕರಣೆ?

ಬೆಂಗಳೂರು: ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳ ಅಚ್ಚರಿಯ ಆಯ್ಕೆ ಆಗಲಿದ್ದು, ಪಕ್ಷದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಲಕ್ಷ್ಮಣ ಸವದಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ರಾಜ್ಯ ಕಾರ್ಯ ದರ್ಶಿ ಕೇಶವ ಪ್ರಸಾದ್ ಅವರಿಗೆ ಟಿಕೆಟ್ ಖಚಿತವಾಗಿದೆ. ಉಳಿದ ಸ್ಥಾನಗಳಿಗೆ ಜಗದೀಶ ಹಿರೇಮನಿ, ಛಲವಾದಿ ನಾರಾಯಣ ಸ್ವಾಮಿ, ಗೀತಾ ವಿವೇಕಾನಂದ, ಮಂಜಮ್ಮ ಜೋಗತಿ ಹೆಸರು ಪರಿಶೀಲನೆಯಲ್ಲಿದೆ ಎಂದು ತಿಳಿದುಬಂದಿದೆ.
ಮಂಗಳವಾರ ಬೆಳಿಗ್ಗೆ ಪಟ್ಟಿ ಬಿಡುಗಡೆಯಾಗಲಿದೆ. ವಿಧಾನಸಭೆಗೆ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಇರುವವರಿಗೆ ಈಗ ಟಿಕೆಟ್ ಕೊಡುವುದು ಬೇಡ ಎಂದು ನಿರ್ಧರಿಸಿದ್ದರಿಂದ ವಿಜಯೇಂದ್ರರಿಗೆ ಟಿಕೆಟ್ ಕೈ ತಪ್ಪಿದೆ ಎಂದು ಹೇಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.