ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ: ಚಿಂಚನಸೂರ ನಾಮಪತ್ರ ಸಲ್ಲಿಕೆ

Last Updated 1 ಆಗಸ್ಟ್ 2022, 21:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ನಡೆಯುತ್ತಿರುವ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಾಬುರಾವ್‌ ಚಿಂಚನಸೂರ ಸೋಮವಾರ ನಾಮಪತ್ರ ಸಲ್ಲಿಸಿದರು.

ಈ ಚುನಾವಣೆಯ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಎರಡು ಪ್ರತಿಗಳಲ್ಲಿ ಚಿಂಚನಸೂರ
ನಾಮಪತ್ರಗಳನ್ನು ಸಲ್ಲಿಸಿದರು. ಮೊದಲ ಪ್ರತಿ ಸಲ್ಲಿಸುವಾಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಂಸದ ಉಮೇಶ್‌ ಜಾಧವ್‌, ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಜತೆಗಿದ್ದರು. ಎರಡನೇ ಪ್ರತಿ ಸಲ್ಲಿಸುವಾಗ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ಮತ್ತು ಶರಣು ಸಲಗರ ಇದ್ದರು.

₹ 10 ಕೋಟಿ ಆಸ್ತಿ ಘೋಷಣೆ: ತಮ್ಮ ಕುಟುಂಬದ ಬಳಿ ಒಟ್ಟು ₹ 10 ಕೋಟಿ ಮೌಲ್ಯದ ಆಸ್ತಿ ಇದೆ ಎಂದು ಚಿಂಚನಸೂರ ನಾಮಪತ್ರದ ಜತೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ. ಚಿಂಚನಸೂರ ಬಳಿ ಮೂರು ಕಾರುಗಳು ಸೇರಿದಂತೆ ₹ 80.94 ಲಕ್ಷದ ಚರಾಸ್ತಿ, ಬೆಂಗಳೂರು, ಕಲಬುರಗಿ, ಬೀದರ್‌, ಯಾದಗಿರಿ ಮತ್ತಿತರ ಸ್ಥಳಗಳಲ್ಲಿ ₹ 7.81 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಅವರ ಪತ್ನಿ ₹ 1.40 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಚಿಂಚನಸೂರ ವಿವಿಧ ಬ್ಯಾಂಕ್‌ ಗಳಲ್ಲಿ ₹ 61.19 ಲಕ್ಷ ಸಾಲ ಹೊಂದಿದ್ದಾರೆ ಎಂಬ ಮಾಹಿತಿ ಪ್ರಮಾಣಪತ್ರದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT