ಸೋಮವಾರ, ಡಿಸೆಂಬರ್ 6, 2021
23 °C

ಬಿಜೆಪಿಗೆ ಅನ್ಯ ಪಕ್ಷಗಳ ಅವಶ್ಯಕತೆ ಇಲ್ಲ: ವಿಜಯೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ಬಿಜೆಪಿಯು ಸ್ವಂತ ಶಕ್ತಿಯ ಮೇಲೆ ಚುನಾವಣೆ ಎದುರಿಸಲಿದ್ದು, ನಮಗೆ ಬೇರೆ ಪಕ್ಷಗಳ ಬೆಂಬಲದ ಅವಶ್ಯಕತೆ ಇಲ್ಲ’ ಎಂದು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂಬ ಕಾಂಗ್ರೆಸ್‌ನ ಆರೋಪ  ಕುರಿತು ಮಾಗಡಿಯಲ್ಲಿ ಬುಧವಾರ ಅವರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು.

‘ವಿರೋಧ ಪಕ್ಷಗಳು ಇಂತಹ ಆರೋಪ ಮಾಡುವುದು ಸಾಮಾನ್ಯ. ಆದರೆ, ನಮಗೆ ಅಂತಹ ಅವಶ್ಯಕತೆ ಇಲ್ಲ. ಪಕ್ಷದ ಮುಖಂಡರೆಲ್ಲ ಸೇರಿ ಅಭ್ಯರ್ಥಿಗಳ ಪರ ರಾಜ್ಯದಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನಗಳಲ್ಲಿ ಗೆಲ್ಲಲಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು