ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆಯ ಹುದ್ದೆಗಳ ಭರ್ತಿಗೆ ಡಿ.5ರಿಂದ ಪರೀಕ್ಷೆ

Last Updated 26 ನವೆಂಬರ್ 2022, 11:00 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕ, ಸ್ವಾಗತಗಾರರು ಹಾಗೂ ದಲಾಯತ್ ಹುದ್ದೆಗಳಿಗೆ ಡಿ.5ರಿಂದ 7ರವರೆಗೆ ಪರೀಕ್ಷೆಗಳು ನಡೆಯಲಿವೆ.

ಡಿ.5ರಂದು ಮಧ್ಯಾಹ್ನ 3.30ರಿಂದ 4.30ರವರೆಗೆ ದಲಾಯತ್ ಹುದ್ದೆಗೆ, 50 ಅಂಕಗಳ ಬಹು ಆಯ್ಕೆ ಮಾದರಿಯ ಪರೀಕ್ಷೆ ನಡೆಯಲಿದೆ.

ಕಂಪ್ಯೂಟರ್‌ ಆಪರೇಟರ್ ಹುದ್ದೆಗಳಿಗೆ (100 ಅಂಕಗಳು) 6ರಂದು ಮಧ್ಯಾಹ್ನ 3ರಿಂದ 5ರವರೆಗೆ, ಕಿರಿಯ ಸಹಾಯಕ ಹಾಗೂ ಸ್ವಾಗತಗಾರರ ಹುದ್ದೆಗಳಿಗೆ (100 ಅಂಕಗಳು) 7ರಂದು ಮಧ್ಯಾಹ್ನ 3ರಿಂದ 5ರವರೆಗೆ ಪರೀಕ್ಷೆಗಳು ನಡೆಯಲಿವೆ.

ಅಭ್ಯರ್ಥಿಗಳು ಡಿ.1ರ ಮಧ್ಯಾಹ್ನದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡು, ನಿಗದಿತ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಬೇಕು ಎಂದು ಕೆಇಎ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT