ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಇಂಚಿಂಚಾಗಿ ಕಡಿಯುತ್ತೇವೆ: ಎಬಿವಿಪಿ ನಾಯಕಿ

ವಿಜಯಪುರ: ‘ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಛತ್ರಪತಿ ಶಿವಾಜಿ ಕೈಯಲ್ಲಿರುವ ಖಡ್ಗದಿಂದ ಇಂಚಿಂಚಾಗಿ ಕಡಿಯುತ್ತೇವೆ‘ ಎಂದು ಎಬಿವಿಪಿ ನಗರ ಪ್ರಮುಖರಾದ ಪೂಜಾ ವೀರಶೆಟ್ಟಿ ಎಚ್ಚರಿಕೆ ನೀಡಿದರು.
ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷಾ ಕೊಲೆ ಖಂಡಿಸಿ ನಗರದಲ್ಲಿ ಬುಧವಾರ ವಿಶ್ವಹಿಂದೂ ಪರಿಷತ್, ಬಜರಂಗದಳ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
’ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಮಾಡಿ ತೋರಿಸುತ್ತೇವೆ’ ಎಂದು ಹೇಳಿದರು.
ದುರ್ಗಾ ವಾಹಿನಿ ಪ್ರಮುಖರಾದ ಮಂಚಾಲೇಶ್ವರಿ ತೋಣಶ್ಯಾಳ ಮಾತನಾಡಿ, ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದುಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಹಿಂದು ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂದರ ಪೋಸ್ಟ್ಮಾರ್ಟ್ಂ ಆಗಬೇಕು. ಆಗ ಹಿಂದುಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿದರು.
‘ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ’ ಎಂದು ಸವಾಲು ಹಾಕಿದರು.
‘ಹಿಂದುಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು’ ಎಂದರು.
ವಿವಾದಾತ್ಮಕ ಹೇಳಿಕೆಯಿಂದ ಸಾಮರಸ್ಯಕ್ಕೆ ಪೆಟ್ಟು: ವಿಶ್ವೇಶ್ವರ ಹೆಗಡೆ ಕಾಗೇರಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.