ಮಂಗಳವಾರ, ನವೆಂಬರ್ 24, 2020
27 °C

ವಿನಯ್‌ ಕುಲಕರ್ಣಿ ಬಂಧನ | ಸಿಬಿಐ ತನ್ನ ಕೆಲಸ ಮಾಡಿದೆ: ಬಸವರಾಜ ಬೊಮ್ಮಾಯಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ‘ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಂಧನ ವಿಚಾರವಾಗಿ ನಾನು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬರುವುದಿಲ್ಲ. ಸಿಬಿಐ ತನ್ನ ಕೆಲಸ ಮಾಡಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಲ್ಲಿ ಗುರುವಾರ ಹೇಳಿದರು. 

‘ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಗೆ ಅಪೇಕ್ಷಿತರಿಗೆ ಮಾತ್ರ ಆಹ್ವಾನವಿದ್ದು, ನಾನು ಭಾಗವಹಿಸಿಲ್ಲ’ ಎಂದು ಪ್ರತಿಕ್ರಿಯಿಸಿದರು.  

ವಿಶ್ರಾಂತಿ ಮೊರೆ ಹೋದ ಸಚಿವ: ತಮ್ಮ ಕುಟುಂಬದೊಂದಿಗೆ ಕೊಡಗಿಗೆ ಆಗಮಿಸಿರುವ ಸಚಿವ ಬಸವರಾಜ್‌ ಬೊಮ್ಮಾಯಿ ಅವರು, ಹೊರ ವಲಯದ ತಾಜ್‌ ರೆಸಾರ್ಟ್‌ನಲ್ಲಿ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೆಸಾರ್ಟ್‌ ಸುತ್ತಮುತ್ತ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು