ಶುಕ್ರವಾರ, ಮಾರ್ಚ್ 31, 2023
23 °C

ಇದೇ 29ಕ್ಕೆ ವಿಷ್ಣುವರ್ಧನ್‌ ಸ್ಮಾರಕ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಲನಚಿತ್ರ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಇದೇ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.

ಮೈಸೂರಿನ ಎಚ್‌.ಡಿ.ಕೋಟೆ ರಸ್ತೆಯಲ್ಲಿರುವ ಅಲ್ಲಾಳು ಗ್ರಾಮದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆಪ್ಟೆಂಬರ್‌ನಲ್ಲಿ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಚಾಮುಂಡಿಪುರಂನ ವಾಸಿಯಾಗಿದ್ದ ವಿಷ್ಣುವರ್ಧನ್‌ ಅವರು ತಮ್ಮ ಶಾಲಾ ಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ್ದರು. ಮೈಸೂರಿನ ಜತೆ ಉತ್ತಮ ಒಡನಾಟ ಹೊಂದಿದ್ದ ಅವರು ತಮ್ಮ ಹೆಚ್ಚಿನ ಚಲನಚಿತ್ರಗಳ ಚಿತ್ರೀಕರಣವನ್ನು ಮೈಸೂರಿನಲ್ಲೇ ನಡೆಸಲು ಒತ್ತು ನೀಡಿದ್ದರು.

ಸ್ಮಾರಕ ಉದ್ಘಾಟನೆಯ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಿಷ್ಣುವರ್ಧನ್ ಅವರ ಅಳಿಯ ಹಾಗೂ ನಟ ಅನಿರುದ್ಧ್ ಅವರು, ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಬರಲು ಒಪ್ಪಿಕೊಂಡಿದ್ದಾರೆ. ಸ್ಮಾರಕ ಉದ್ಘಾಟನೆಗಾಗಿ ಬಹಳ ವರ್ಷಗಳಿಂದ ಅಭಿಮಾನಿಗಳು ಕಾದಿದ್ದರು. ಆ ದಿನ ಬಂದಿದೆ, ಎಲ್ಲ ಅಭಿಮಾನಿಗಳೂ ಹಾಜರಿರಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು