ಬುಧವಾರ, ಅಕ್ಟೋಬರ್ 20, 2021
29 °C

ಮರಳಿನಲ್ಲಿ ಅರಳಿದ ವಿಷ್ಣುವರ್ಧನ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮರಳು ಶಿಲ್ಪ ಕಲೆಯ ತವರೂರು ಎಂದೇ ಖ್ಯಾತಿ ಪಡೆದಿರುವ ಒಡಿಶಾದ ಪುರಿಯ ಮೆರೀನ್ ಡ್ರೈವ್ ಬೀಚ್‌ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಕಲಾವಿದರೊಬ್ಬರ ಮರಳು ಶಿಲ್ಪ ಅರಳಿದೆ.

ಇದೇ 18ರಂದು ಕನ್ನಡದ ಮೇರುನಟ ದಿವಂಗತ ವಿಷ್ಣುವರ್ಧನ್‌ ಅವರ 71ನೇ ಜನ್ಮದಿನ. ಇದೇ ಸಂದರ್ಭದಲ್ಲಿ ಹೆಸರಾಂತ ಮರಳು ಶಿಲ್ಪಿ ಮನೀಶ್ ಕುಮಾರ್ ಅವರು ವಿಷ್ಣುವರ್ಧನ್‌ ಅವರ ಮರಳು ಶಿಲ್ಪವನ್ನು ರಚಿಸಿದ್ದಾರೆ. ‘ಜೈ ಕನ್ನಡ. ಭಾರತೀಯ ಸಿನಿಮಾದ ಹೆಮ್ಮೆ ಡಾ.ವಿಷ್ಣುವರ್ಧನ್‌’ ಎನ್ನುವ ಅಡಿಬರಹದೊಂದಿಗೆ ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ. ಇದಕ್ಕೆ ಅಗತ್ಯ ಹಣಕಾಸು ನೆರವನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು