ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಕಾರಿ ಬರಹ: ವಿಶ್ವೇಶ್ವರ ಭಟ್‌ ಕ್ಷಮೆಯಾಚನೆ

ರಾಷ್ಟ್ರಪತಿ ಕುರಿತು ಅವಹೇಳನಕಾರಿ ಬರಹ
Last Updated 3 ನವೆಂಬರ್ 2022, 22:05 IST
ಅಕ್ಷರ ಗಾತ್ರ

ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಕಾರಿಯಾಗಿ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಹಾಜರಾಗಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ.

‘ವಿಶ್ವೇಶ್ವರ ಭಟ್‌ ಆಯೋಗದ ಮುಂದೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ಈ ಸಂಬಂಧ ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ’ ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ‘ಪ್ರಜಾವಾಣಿ’ಗೆ ತಿಳಿಸಿದರು. ‘ಭಾರತದ ರಾಷ್ಟ್ರಪತಿ ಅವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ವಿಶ್ವೇಶ್ವರ ಭಟ್‌ ಸ್ಪಷ್ಟಪಡಿಸಿದ್ದಾರೆ’ ಎಂದೂ ತಿಳಿಸಿದರು.

ಆಯೋಗವು ಕ್ಷಮಾಪಣೆ ಪತ್ರದೊಂದಿಗೆ ಪ್ರಕರಣದ ವಿವರಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದೆ ಎಂದೂ ಅವರು ಮಾಹಿತಿ ನೀಡಿದರು.

ರಾಷ್ಟ್ರಪತಿ ವಿರುದ್ಧ ಅವಹೇಳನಕಾರಿಯಾಗಿ ಬರೆದುದರ ಬಗ್ಗೆ ಮಾಡಲಾಗಿದ್ದ ಪೋಸ್ಟ್ ಅನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು, ಖುದ್ದಾಗಿ ಹಾಜರಾಗುವಂತೆ ನೋಟಿಸ್‌ ನೀಡಿತ್ತು.

ಮೊಹಮ್ಮದ್ ಮಫಾಜ್ ಎಂಬುವವರು ಈ ಬಗ್ಗೆ ಅಕ್ಟೋಬರ್ 9ರಂದು ಟ್ವೀಟ್ ಮಾಡಿದ್ದರು. ‘(ಕನ್ನಡ ದಿನಪತ್ರಿಕೆ ವಿಶ್ವವಾಣಿ) ಪತ್ರಕರ್ತ (ಪ್ರಧಾನ ಸಂಪಾದಕ) ರಾಷ್ಟ್ರಪತಿ ಅವರನ್ನು ಅವಹೇಳನ ಮಾಡಿದ್ದಾರೆ’ ಎಂದು ಮಫಾಜ್‌ ಟ್ವೀಟ್‌ ಮಾಡಿದ್ದರು.

ಪತ್ರಿಕೆಯ ಸಂಪಾದಕೀಯ ಪುಟದಲ್ಲಿ ಪ್ರಕಟವಾಗಿದ್ದ ಲೇಖನದ ಎರಡು ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದರು. ಜತೆಗೆ ಟ್ವೀಟ್‌ ಅನ್ನು ರಾಷ್ಟ್ರಪತಿ ಭವನದ ಟ್ವಿಟರ್ ಖಾತೆಗೆ ಟ್ಯಾಗ್‌ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT