ಭಾನುವಾರ, ನವೆಂಬರ್ 28, 2021
20 °C

ಜೈನಾಪುರ, ಮೀನಾಗೆ ‘ವಿ.ಕೃ. ಗೋಕಾಕ್ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ 2021ನೇ ಸಾಲಿನ ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಸಾಹಿತಿ ಎಸ್.ಎ. ಜೈನಾಪುರ ಮತ್ತು ರಾಜ್ಯಶಾಸ್ತ್ರಜ್ಞೆ ಮೀನಾ ದೇಶಪಾಂಡೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್‌ನ ಅಧ್ಯಕ್ಷ ವೈ.ಎನ್. ಗಂಗಾಧರ ಶೆಟ್ಟಿ, ಕಾರ್ಯದರ್ಶಿ ಅನಿಲ್ ಗೋಕಾಕ್, ಸಹಕಾರಿ ಧುರೀಣ ಬಿ.ಎಸ್. ವಿಶ್ವನಾಥ್, ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ ಮತ್ತು ಅಭಿನವ ಪ್ರಕಾಶನದ ನ. ರವಿಕುಮಾರ್ ಅವರನ್ನು ಒಳಗೊಂಡ ಸಮಿತಿಯು ಈ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಿದೆ. 

ಇದೇ 30ರಂದು ಬೆಳಿಗ್ಗೆ 11.30ಕ್ಕೆ ಇಲ್ಲಿನ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಸಾಹಿತಿಗಳಾದ ಹಂ.ಪ. ನಾಗರಾಜಯ್ಯ ಹಾಗೂ ಕಮಲಾ ಹಂಪನಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು