ಬುಧವಾರ, ಏಪ್ರಿಲ್ 14, 2021
28 °C

ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ: ಹೈಕೋರ್ಟ್‌ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘಕ್ಕೆ ಮುಂದಿನ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ ನೀಡಿದೆ.

ಕೃಷ್ಣೇಗೌಡ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಪೀಠ, ಅರ್ಜಿ ಇತ್ಯರ್ಥಪಡಿಸಿತು.

‘ಸಂಘದ ಪದಾಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದ ಕಾರಣದಿಂದ ಹಿಂದಿನ ಕಾರ್ಯಕಾರಿ ಸಮಿತಿಯನ್ನು ಪದಚ್ಯುತಿಗೊಳಿಸಲಾಗಿತ್ತು. ಸಂಘದ ಕಾರ್ಯಗಳ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಅವರನ್ನು ಸರ್ಕಾರ ನೇಮಿಸಿತ್ತು. ಕಾನೂನಿನ ಪ್ರಕಾರ ಆಡಳಿತಾಧಿಕಾರಿ ಅವಧಿ ಆರು ತಿಂಗಳು ಮಾತ್ರ. ಅಷ್ಟರಲ್ಲಿ ಚುನಾವಣೆ ನಡೆಸಬೇಕು. ಆದರೆ, ಎರಡೂವರೆ ವರ್ಷಗಳಿಂದ ಆಡಳಿತಾಧಿಕಾರಿ ಅವಧಿ ವಿಸ್ತರಣೆ ಮಾಡಿಕೊಂಡೇ ಬರಲಾಗುತ್ತಿದೆ. ಚುನಾವಣೆ ನಡೆಸುತ್ತಿಲ್ಲ’ ಎಂದು ಅರ್ಜಿದಾರರ ಪರ ವಕೀಲ ಧರ್ಮಪಾಲಗೌಡ ವಾದ ಮಂಡಿಸಿದರು.

‘ನಿಯಮಗಳ ಪ್ರಕಾರ ಆಡಳಿತಾಧಿಕಾರಿ ಅವಧಿ ಆರು ತಿಂಗಳು ಮಾತ್ರ. ಆದ್ದರಿಂದ  ಚುನಾವಣೆ ನಡೆಸಬೇಕು’ ಎಂದು ಪೀಠ ನಿರ್ದೇಶನ ನೀಡಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು