ರಾಮನಗರ: ‘ಒಕ್ಕಲಿಗರಿಗೆ ಮೀಸಲಾತಿ ಬೇಕು ಎನ್ನುವುದು ಸಮುದಾಯದ ಜನರ ಬೇಡಿಕೆಯಾಗಿದ್ದು ಇದರ ಹಿಂದೆ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವ ಕುರಿತು ರಾಮನಗರದಲ್ಲಿ ಶನಿವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ‘ಒಕ್ಕಲಿಗ ಸಮುದಾಯಕ್ಕೆ ಹಲವು ಸಮಸ್ಯೆಗಳಿವೆ. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಮಂದಿ ಜಮೀನು ಕಳೆದುಕೊಂಡಿದ್ದಾರೆ. ಈ ಎಲ್ಲದನ್ನೂ ಗಮನಿಸಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ನಿರ್ಮಲಾನಂದನಾಥ ಶ್ರೀಗಳು ಸಹ ಕಳೆದ ಒಂದೂವರೆ ವರ್ಷದಿಂದ ಈ ಬಗ್ಗೆ ಹೋರಾಟ ಮಾಡುತ್ತಿದ್ದಾರೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.