ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಸುದ್ದಿ ತಡೆಯದಿದ್ದರೆ ಪ್ರತಿಭಟನೆ: ಶಾಸಕ ಸಿ.ಎನ್‌. ಬಾಲಕೃಷ್ಣ

ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್‌. ಬಾಲಕೃಷ್ಣ ಎಚ್ಚರಿಕೆ
Last Updated 20 ಮಾರ್ಚ್ 2023, 16:25 IST
ಅಕ್ಷರ ಗಾತ್ರ

ಬೆಂಗಳೂರು: ‘ಉರಿಗೌಡ ಮತ್ತು ನಂಜೇಗೌಡ ಎಂಬ ಕಲ್ಪಿತ ವ್ಯಕ್ತಿಗಳನ್ನು ಮುಂದಿಟ್ಟುಕೊಂಡು ಸುಳ್ಳು ಹಬ್ಬಿಸುವುದನ್ನು ರಾಜ್ಯ ಸರ್ಕಾರ ತಡೆಯದಿದ್ದರೆ ಒಕ್ಕಲಿಗರ ಸಂಘದಿಂದ ಆದಿ ಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷರೂ ಆಗಿರುವ ಜೆಡಿಎಸ್‌ ಶಾಸಕ ಸಿ.ಎನ್‌. ಬಾಲಕೃಷ್ಣ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಇ್ತತೀಚೆಗೆ ಕೆಲವರು ಉರಿಗೌಡ ಮತ್ತು ನಂಜೇಗೌಡ ಎಂಬ ಒಕ್ಕಲಿಗರ ಹೆಸರು ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಖಂಡನೀಯ. ಈ ರೀತಿ ಸುಳ್ಳಿನ ಮೂಲಕ ಒಕ್ಕಲಿಗ ಸಮುದಾಯವನ್ನು ಅವಮಾನಿಸುವ ಪ್ರಯತ್ನವನ್ನು ನಮ್ಮ ಸಮುದಾಯವು ಸಹಿಸುವುದಿಲ್ಲ’ ಎಂದು ಹೇಳಿದ್ದಾರೆ.

ಚುನಾವಣೆ ಹತ್ತಿರದಲ್ಲಿರುವುದರಿಂದ ರಾಜಕೀಯ ಲಾಭ ಗಳಿಸುವ ಉದ್ದೇಶದಿಂದ ಈ ರೀತಿ ಮಾಡುತ್ತಿರುವ ಸಾಧ್ಯತೆ ಇದೆ. ಸ್ವಾಭಿಮಾನಿಗಳಾದ ಒಕ್ಕಲಿಗ ಸಮುದಾಯದ ಜನರು ಸುಳ್ಳುಗಳಿಗೆ ಯಾವುದೇ ಕಾರಣಕ್ಕೂ ಮಾರುಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

ಕಣ್ಣೊರೆಸುವ ತಂತ್ರ: ‘ಪ್ರವರ್ಗ 2–ಸಿ ಅಡಿಯಲ್ಲಿ ಒಕ್ಕಲಿಗರ ಮೀಸಲಾತಿ ಹೆಚ್ಚಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿರುವುದು ಕಣ್ಣೊರೆಸುವ ತಂತ್ರ. ಈ ತೀರ್ಮಾನದಿಂದ ಮೀಸಲಾತಿ ವಿಚಾರದಲ್ಲಿ ಒಕ್ಕಲಿಗರಿಗೆ ಯಾವುದೇ ಪ್ರಯೋಜನವಿಲ್ಲ’ ಎಂದು ಬಾಲಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರ ಪ್ರದೇಶದ ಒಕ್ಕಲಿಗರಲ್ಲಿ ಬಡವರಿಗೆ ಆರ್ಥಿಕವಾಗಿ ಹಿಂದುಳಿದಿರುವವರ (ಇಡಬ್ಲ್ಯುಎಸ್‌) ಕೋಟಾ ಅಡಿಯಲ್ಲಿ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ತೀರ್ಮಾನ ಶ್ಲಾಘನೀಯವಾದುದು. ಆದರೆ, ಜನಸಂಖ್ಯೆಗೆ ಅನುಗುಣವಾಗಿ ಸಮುದಾಯಕ್ಕೆ ಮೀಸಲಾತಿ ನೀಡಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಜನಸಂಖ್ಯೆ ಆಧಾರದಲ್ಲಿ ಒಕ್ಕಲಿಗರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಒಕ್ಕಲಿಗರ ಸಂಘದಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT