ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗರ ಸಂಘದ ಚುನಾವಣೆ: ಮೇಲ್ಮನವಿ ವಜಾ

Last Updated 10 ಡಿಸೆಂಬರ್ 2021, 16:33 IST
ಅಕ್ಷರ ಗಾತ್ರ

ಬೆಂಗಳೂರು: ‘ನಿಗದಿತ ವೇಳಾಪಟ್ಟಿ ಅನುಸಾರ ಇದೇ 12ರಂದು ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಬೇಕು’ ಎಂಬ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಕೃಷ್ಣೇಗೌಡ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ, ‘ಸಂಘದ ಸದಸ್ಯರ ಪಟ್ಟಿಯನ್ನು ಪರಿಷ್ಕರಿಸಲಾಗಿಲ್ಲ’ ಎಂಬ ಅರ್ಜಿದಾರರ ಆಕ್ಷೇಪಣೆಯನ್ನು ತಳ್ಳಿ ಹಾಕಿತು.

‘ಚುನಾವಣಾ ಫಲಿತಾಂಶವು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಏಕಸದಸ್ಯ ನ್ಯಾಯಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿರುವಾಗ ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಜಾಗೊಳಿಸಿ ಆದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT