ಶುಕ್ರವಾರ, ಜನವರಿ 27, 2023
17 °C
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್ ಮೀನಾ

‘ಹೆಸರು ಸೇರ್ಪಡೆಗೆ ಮತದಾರರ ಸಹಾಯವಾಣಿ ಆ್ಯಪ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ದೇಶದ ಯಾವುದೇ ಮೂಲೆಯಲ್ಲಿದ್ದರೂ ‘ಮತದಾರರ ಸಹಾಯವಾಣಿ’ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಮತದಾರರ ಪಟ್ಟಿಗೆ ಸೇರಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್ ಮೀನಾ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯ ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ನೋಂದಣಿ
ಜಾಗೃತಿ ಅಭಿಯಾನ ಮತ್ತು ಸಂವಿಧಾನ ದಿನ ಕಾರ್ಯಕ್ರಮ ಉದ್ಘಾಟಿಸಿ, ಈಗಾಗಲೇ ಶೇ 99ರಷ್ಟು ಮತದಾರರ ನೋಂದಣಿ ಆನ್‌ಲೈನ್‌ ಮೂಲಕವೇ ನಡೆದಿದೆ. 18 ವರ್ಷ ತುಂಬಿದ ಯುವ
ಜನರು ನೋಂದಣಿ ಮಾಡಿಕೊಳ್ಳಬೇಕು. ಸದೃಢ ದೇಶ ಕಟ್ಟಲು, ಭವಿಷ್ಯದ ಭಾರತ ನಿರ್ಮಾಣಕ್ಕಾಗಿ ಮತದಾರರ ಪಟ್ಟಿಗೆ ಸೇರಬೇಕು ಎಂದು ಸಲಹೆ ನೀಡಿದರು.

ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗ ಗಳ ಜವಾಬ್ದಾರಿಗಳು ಭಿನ್ನ. ಸ್ಥಳೀಯ ಸಂಸ್ಥೆ
ಗಳ ಚುನಾವಣಾ ಹೊಣೆಗಾರಿಕೆ ರಾಜ್ಯ ಚುನಾವಣಾ ಆಯೋಗದ ಮೇಲಿರುತ್ತದೆ. ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳ ಚುನಾವಣೆ ಗಳನ್ನು ಕೇಂದ್ರ ಚುನಾವಣಾ ಆಯೋಗ ನಡೆಸು ತ್ತದೆ. ಈಚಿನ ದಿನಗಳಲ್ಲಿ ಚುನಾವಣಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು