ಶನಿವಾರ, ಜನವರಿ 28, 2023
21 °C
‘ಆಯೋಗದಿಂದಲೇ ಪಟ್ಟಿ ಪರಿಷ್ಕರಣೆ’

ಚುನಾವಣಾ ಆಯೋಗದಿಂದಲೇ ಪಟ್ಟಿ ಪರಿಷ್ಕರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಚುನಾವಣಾ ಆಯೋಗದ ನೇತೃತ್ವದಲ್ಲಿಯೇ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಅಲ್ಪಸಂಖ್ಯಾತರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎನ್ನುವುದು ಸುಳ್ಳು. ಒಬ್ಬರ ಹೆಸರು 2-3 ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿದ್ದರೆ, ಮತದಾರರು ಅಧಿಕೃತವಾಗಿ ವಾಸವಿರುವ ಕ್ಷೇತ್ರದಲ್ಲಿ ಮಾತ್ರ ಹೆಸರು ಉಳಿಸಿಕೊಳ್ಳಲಾಗುತ್ತಿದೆ. ಉಳಿದೆಡೆ ತೆಗೆಯಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೆಲವರ ಹೆಸರುಗಳನ್ನು ಅನಧಿಕೃತವಾಗಿ ಹುಬ್ಬಳ್ಳಿ, ಬೆಂಗಳೂರು ಮತದಾರರ ಪಟ್ಟಿಯಲ್ಲಿ ಕಂಡು ಬಂದಿದೆ. ಇಂತಹವನ್ನು ಪರಿಷ್ಕರಿಸಲಾಗುತ್ತಿದ್ದು, ಈ ಈ ಕೆಲಸವನ್ನು ಆಯೋಗ ಮಾಡುತ್ತಿವೆ’ ಎಂದು ಅವರು ತಿಳಿಸಿದರು.

‘ಚುನಾವಣಾ ಆಯೋಗ ದೂರು ನೀಡಿದಲ್ಲೆಲ್ಲ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುವುದು’ ಎಂದು ಅವರು ಹೇಳಿದರು.

ಎಫ್‌ಐಆರ್‌ನಲ್ಲಿ ದೋಷ: ‘ಮೂವರು ಯುವಕರ ಮೇಲಷ್ಟೇ ಎಫ್‌ಐಆರ್ ದಾಖಲಿಸಿ ಪ್ರಕರಣ ಮುಚ್ಚಿಹಾಕುವ ಕೆಲಸ ನಡೆಯುತ್ತಿದೆ. ಇತರರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಬೇಕಿತ್ತು. ಪೊಲೀಸರೂ ಕಂಪನಿ ಜೊತೆ ಭಾಗಿಯಾಗಿದ್ದು, ಆಯೋಗ ಸ್ವತಂತ್ರವಾಗಿ ತನಿಖೆ ನಡೆಸಬೇಕು’ ಎಂದು ದೂರುದಾರ ರಜತ ಉಳ್ಳಾಗಡ್ಡಿಮಠ ಅವರು ಒತ್ತಾಯಿಸಿದರು.

***

ಚುನಾವಣಾ ಆಯೋಗವು ಮತದಾರರ ಕರಡು ಪಟ್ಟಿ ಪ್ರಕಟಿಸಿದ್ದು, ಇದನ್ನು ಪರಿಶೀಲಿಸಲು ಪಕ್ಷದ ಕಾರ್ಯಕರ್ತರಿಂದ ಸಮೀಕ್ಷೆ ಮಾಡಿಸಲಾಗುತ್ತಿದೆ.

- ಅರವಿಂದ ಬೆಲ್ಲದ, ಶಾಸಕ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು