ಬುಧವಾರ, ಸೆಪ್ಟೆಂಬರ್ 22, 2021
23 °C

ಸ್ಥಳೀಯ ಸಂಸ್ಥೆ ಚುನಾವಣೆಗೆ ಮತದಾರರ ಪಟ್ಟಿ ಸಿದ್ಧ: ಹೈಕೋರ್ಟ್‌ಗೆ ಚುನಾವಣಾ ಆಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ– ಧಾರವಾಡ, ಕಲಬುರ್ಗಿ, ತರೀಕೆರೆ, ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮತದಾರರ ಪಟ್ಟಿ ಸಿದ್ಧತೆ ಕಾರ್ಯ ಪೂರ್ಣಗೊಂಡಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

‘ಪರಿಸ್ಥಿತಿ ನೋಡಿಕೊಂಡು ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗುವುದು’ ಎಂದು ಆಯೋಗದ ಪರ ವಕೀಲರು ತಿಳಿಸಿದರು. ಈ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಆ.3ಕ್ಕೆ ಮುಂದೂಡಿತು.

ಅವಧಿ ಪೂರ್ಣಗೊಂಡಿರುವ ಸ್ಥಳೀಯ ಸಂಸ್ಥೆಗಳಿಗೆ ಸಂವಿಧಾನದ ಪರಿಚ್ಛೇದ 243(ಯು) ಪ್ರಕಾರ ಕೂಡಲೇ ಚುನಾವಣೆ ನಡೆಬೇಕು. ಅದು ಪಾಲನೆ ಆಗದಿರುವುದನ್ನು ಗಮನಿಸಿದ ಪೀಠ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು