ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪರಿಷ್ಕೃತ ಪಟ್ಟಿ ಪ್ರಕಟ

Last Updated 18 ಜನವರಿ 2021, 19:08 IST
ಅಕ್ಷರ ಗಾತ್ರ

ಬೆಂಗಳೂರು: ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಬಳಿಕ ಅಂತಿಮ ಕರಡು ಪಟ್ಟಿಯನ್ನು ಇದೇ 18ರಂದು ಬಿಬಿಎಂಪಿ ಕಂದಾಯ ಅಧಿಕಾರಿಗಳ ಕಚೇರಿ, ಎಲ್ಲ ತಾಲ್ಲೂಕು, ಜಿಲ್ಲೆ ಕಚೇರಿಗಳು ಮತ್ತು ಎಲ್ಲ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ.

ರಾಜ್ಯ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕರಡು ಮತದಾರರ ಪಟ್ಟಿ ವೀಕ್ಷಣೆಗೆ ಲಭ್ಯವಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಬಳಿಕ ರಾಜ್ಯದಲ್ಲಿ ಒಟ್ಟು 2,63,19,044 ಪುರುಷ, 2,58,56,825 ಮಹಿಳೆಯರು, ತೃತೀಯ ಲಿಂಗದ 4,763 ಮತದಾರರು ಇದ್ದಾರೆ. ವಲಸೆ, ಪುನರಾವರ್ತನೆ ಮತ್ತು ಮೃತಪಟ್ಟ ಕಾರಣಕ್ಕೆ ಒಟ್ಟು 1,93,309 ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

2021ರ ಜ. 1ಕ್ಕೆ 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೇ ಇರುವವರು ನಮೂನೆ 6 ಅನ್ನು ಅವಶ್ಯವಿರುವ ದಾಖಲೆಗಳ ಜೊತೆ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು, ಜನ್ಮ ದಿನಾಂಕ, ತಂದೆಯ ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿ ಮಾಡಬೇಕಾದರೆ ನಮೂನೆ 8 ಅನ್ನು ಮತದಾರರ ನೋಂದಣಾಧಿಕಾರಿಗಳಿಗೆ ಅವಶ್ಯವಿರುವ ದಾಖಲೆಗಳನ್ನು ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. ಸಾರ್ವಜನಿಕರು ತಮ್ಮ ಅರ್ಜಿಗಳನ್ನು ವಿವಿಧ ನಮೂನೆಗಳಲ್ಲಿ ಆನ್‌ಲೈನ್‌ (www.nvsp.in) ಮೂಲಕ ಸಲ್ಲಿಸಬಹುದು ಎಂದೂ ಆಯೋಗ ತಿಳಿಸಿದೆ.

ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಹೊಸತಾಗಿ ಹೆಸರು ಸೇರಿಸಲು 6,41,443 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 5,95,381 ಅರ್ಜಿಗಳು ಅಂಗೀಕೃತಗೊಂಡಿವೆ. ಪಟ್ಟಿಯಿಂದ ಹೆಸರು ತೆಗೆಯಲು 2,01,136 ಅರ್ಜಿಗಳು ಬಂದಿದ್ದು, 1,93,309 ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ತಿದ್ದುಪಡಿಗಾಗಿ 3,03,223 ಅರ್ಜಿಗಳು ಸಲ್ಲಿಕೆಯಾಗಿದ್ದು, 2,60,528 ಸ್ವೀಕೃತ ಆಗಿವೆ ಎಂದೂ ಆಯೋಗ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT