ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಾ ಪಾಲಿಕೆಗೆ ಮೇಯರ್‌, ಉಪಮೇಯರ್‌ ಚುನಾವಣೆ ನಡೆಸಿ: ಉಗ್ರಪ್ಪ

Last Updated 6 ಸೆಪ್ಟೆಂಬರ್ 2021, 10:16 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೆ ಮೇಯರ್‌, ಉಪಮೇಯರ್‌ ಚುನಾವಣೆ ಶೀಘ್ರದಲ್ಲಿ ನಡೆಸಬೇಕು’ ಎಂದು ಮಾಜಿ ಸಂಸದ, ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಆಗ್ರಹಿಸಿದರು.

‘ಬಳ್ಳಾರಿ ಮಹಾನಗರ ಪಾಲಿಕೆಯ ಚುನಾವಣೆ ಮುಗಿದು ನಾಲ್ಕು ತಿಂಗಳಾಗಿದೆ. ಅಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿದೆ. ಕಾಂಗ್ರೆಸ್‌ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಇದುವರೆಗೆ ಅಲ್ಲಿ ಮೇಯರ್‌, ಉಪಮೇಯರ್‌ ಚುನಾವಣೆ ನಡೆಸಿಲ್ಲ. ಕೆಲ ದಿನಗಳ ಹಿಂದೆ ಮೈಸೂರು ಪಾಲಿಕೆಯ ಮೇಯರ್‌ ಚುನಾವಣೆ ನಡೆಸಿ, ಬಿಜೆಪಿ ಗದ್ದುಗೆ ಹಿಡಿದಿದೆ’ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಬೆಳಗಾವಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿದೆ. ಕಲಬುರ್ಗಿಯಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಈ ಮೂರು ಹಾಗೂ ಬಳ್ಳಾರಿ ಪಾಲಿಕೆಗೆ ಕೂಡಲೇ ಮೇಯರ್‌, ಉಪಮೇಯರ್‌ ಆಯ್ಕೆ ಪ್ರಕ್ರಿಯೆ ನಡೆಸಬೇಕು. ಎಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಬಂದಿವೆಯೋ ಅಂತಹ ಕಡೆಗಳಲ್ಲಿ ‘ಆಪ್‌ರೇಷನ್‌ ಕಮಲ’ ನಡೆಸಿ, ಪ್ರಜಾಪ್ರಭುತ್ವ, ಸಂವಿಧಾನಕ್ಕೆ ದ್ರೋಹ ಬಗೆದು ಅಧಿಕಾರಕ್ಕೆ ಬರುವ ಕೆಲಸ ಮಾಡಬಾರದು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪದ ಕೊಡಬಾರದು’ ಎಂದು ಹಕ್ಕೊತ್ತಾಯ ಮಾಡಿದರು.

‘ಬಳ್ಳಾರಿಯಲ್ಲಿ ಮೇಯರ್‌, ಉಪಮೇಯರ್‌ ಚುನಾವಣೆ ನಡೆಸುವಂತೆ ಆಗ್ರಹಿಸಿ ರಾಜ್ಯ ಚುನಾವಣೆ ಆಯೋಗ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿಯಾಗಿ ಚರ್ಚಿಸಿರುವೆ. ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೂ ಚುನಾವಣೆ ನಡೆಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT