ಶುಕ್ರವಾರ, ಮಾರ್ಚ್ 5, 2021
30 °C

ಆಫ್‌ಲೈನ್ ಪರೀಕ್ಷೆ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಆಫ್‌ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದನ್ನು ಪ್ರಶ್ನಿಸಿ 120 ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ಇತ್ಯರ್ಥಪಡಿಸಿದೆ.

‘ಸರ್ಕಾರ ಮತ್ತು ವಿಶ್ವವಿದ್ಯಾಲಯ ಹೊರಡಿಸಿರುವ ಮಾರ್ಗದರ್ಶಿ ಸೂತ್ರಗಳ(ಎಸ್‌ಒಪಿ) ಪ್ರಕಾರ ಪ‍ರೀಕ್ಷೆ ನಡೆಸಬೇಕು. ಈ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಕಾಲೇಜುಗಳು ಎಸ್ಒಪಿ ‍ಪಾಲಿಸಬೇಕು’ ಎಂದು ನ್ಯಾಯಮೂರ್ತಿ ಆರ್‌. ದೇವದಾಸ್ ಅವರಿದ್ದ ಪೀಠ ತಿಳಿಸಿದೆ.

‘ಆಫ್‌ಲೈನ್ ‍ಪರೀಕ್ಷೆ ನಡೆಸಲು ವಿಟಿಯು ತೀರ್ಮಾನಿಸುವ ಮೂಲಕ ಕೋವಿಡ್ ಸಂದರ್ಭದಲ್ಲೂ ವಿದ್ಯಾರ್ಥಿಗಳು ಬೆಂಗಳೂರಿಗೆ ಪ್ರಯಾಣಿಸಬೇಕಾದ ಅನಿವಾರ್ಯತೆ ಸೃಷ್ಟಿಸಿದೆ’ ಎಂದು ವಿದ್ಯಾರ್ಥಿಗಳು ಅರ್ಜಿಯಲ್ಲಿ ದೂರಿದ್ದರು.

‘ಪರೀಕ್ಷೆ ನಡೆಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಬೇರೆ ಬೇರೆ ಪರೀಕ್ಷೆಗಳ ಸಂದರ್ಭದಲ್ಲಿ ಹೈಕೋರ್ಟ್ ನೀಡಿರುವ ಆದೇಶಗಳನ್ನು ಸಮಿತಿ ಅವಲೋಕನ ಮಾಡಿದೆ. ಆನ್‌ಲೈನ್ ಪರೀಕ್ಷೆ ನಡೆಸುವುದು ತಾಂತ್ರಿಕವಾಗಿ ಕಷ್ಟ. ರಾಜ್ಯ ಸರ್ಕಾರ ಮತ್ತು ಸಂಬಂಧಿಸಿದ ಇತರ ಇಲಾಖೆಗಳ ಜೊತೆ ಸಮಾಲೋಚನೆ ನಡೆಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ವಿಟಿಯು ಸ್ಪಷ್ಟಪಡಿಸಿತು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು