ಶುಕ್ರವಾರ, ಮಾರ್ಚ್ 31, 2023
26 °C

ವಿಟಿಯು: ಪೂರಕ ಪರೀಕ್ಷೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಸೆಮಿಸ್ಟರ್‌ ಹಾಗೂ ಮುಖ್ಯ ಪರೀಕ್ಷೆಗಳಲ್ಲಿ ಅನುತ್ತೀರ್ಣ ರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಯೋಜನೆ ರೂಪಿಸುತ್ತಿದೆ. 

ಸ್ವಾಯತ್ತ ಕಾಲೇಜುಗಳು, ಖಾಸಗಿ ವಿ.ವಿಗಳಲ್ಲಿ ಈ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ. ವಿಟಿಯುನಲ್ಲೂ ಜಾರಿಗೆ ತಂದರೆ ವಿಶ್ವವಿದ್ಯಾಲಯದ ಅಧೀನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಫಲಿತಾಂಶ
ಗಳನ್ನು ಪ್ರಕಟಿಸಿದ ಒಂದು ತಿಂಗಳ ಒಳಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ಸಿಗಲಿದೆ. ಪರೀಕ್ಷೆಯನ್ನು ತೆಗೆದುಕೊಳ್ಳಲು ಆಸಕ್ತಿ ಹೊಂದಿರುವವರಿಗೆ ತ್ವರಿತ ತರಗತಿಗಳನ್ನೂ ನಡೆಸಲಾಗುತ್ತದೆ.

ಸೆಮಿಸ್ಟರ್‌ ಫಲಿತಾಂಶಗಳ ಪ್ರಕಟಣೆಯ ನಂತರ ವಿದ್ಯಾರ್ಥಿಗಳು ಅನುತ್ತೀರ್ಣ ಅಂಕಪಟ್ಟಿ ಬದಲು, ಪೂರಕ ಪರೀಕ್ಷೆಯ ಫಲಿತಾಂಶದ ನಂತರವೇ ಅಂತಿಮ ಅಂಕಪಟ್ಟಿ ಪಡೆಯಬಹುದು. 

ತರಗತಿಗಳಿಗೆ ಹಾಜರಾದವರು, ಆಂತರಿಕ ಮೌಲ್ಯಮಾಪನದಲ್ಲಿ ಶೇ 90 ಅಂಕ ಪಡೆದವರು, ಆರೋಗ್ಯ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಸ್ವಾಯತ್ತ ಕಾಲೇಜುಗಳಲ್ಲಿ ಈ ಅವಕಾಶ ಒದಗಿಸಲಾಗುತ್ತಿದೆ. ಈ ಕುರಿತು ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಿತಿಯನ್ನೂ ರಚಿಸಿಕೊಂಡಿವೆ.

‘ಪೂರಕ ಪರೀಕ್ಷೆಗಳನ್ನು ಜಾರಿಗೊಳಿಸುವ ಕುರಿತು ಚರ್ಚೆ ನಡೆದಿದೆ. ವಿದ್ಯಾರ್ಥಿಗಳ ವಲಯದಿಂದಲೂ ಒತ್ತಾಯವಿದೆ. ವಿದ್ಯಾವಿಷಯಕ ಪರಿಷತ್‌, ಸಿಂಡಿಕೇಟ್‌ನಲ್ಲಿ ಮಂಡಿಸಿ, ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ’ ಎಂದು ವಿಟಿಯು ಕಲಪತಿ ವಿದ್ಯಾಶಂಕರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು