ಶನಿವಾರ, ಏಪ್ರಿಲ್ 1, 2023
33 °C

ಪ್ರಜಾವಾಣಿ ಅಮೃತ ಮಹೋತ್ಸವದ ಪ್ರಯುಕ್ತ ತುಮಕೂರಿನಲ್ಲಿ ವಾಕಥಾನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ‘ಪ್ರಜಾವಾಣಿ’ಯ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಶನಿವಾರ ವಾಕಥಾನ್‌ ಹಮ್ಮಿಕೊಳ್ಳಲಾಗಿತ್ತು.

ನಗರದ ಬಿಜಿಎಸ್ ವೃತ್ತದಲ್ಲಿ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಹಸಿರು ನಿಶಾನೆ ತೋರುವ ಮೂಲಕ ವಾಕಥಾನ್ ಗೆ ಚಾಲನೆ ನೀಡಿದರು.

ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ವಾಕಥಾನ್‌ ಆಯೋಜಿಸಲಾಗಿತ್ತು.

ಬಿ.ಎಚ್.ರಸ್ತೆಯ ಮುಖಾಂತರ ಸಾಗಿದ ವಾಕಥಾನ್  ಭದ್ರಮ್ಮ ಛತ್ರ ವೃತ್ತ, ಶಿವಕುಮಾರ ಸ್ವಾಮೀಜಿ ವೃತ್ತದ ಮೂಲಕ ತೆರಳಿ ಸಿದ್ಧಗಂಗಾ ಆಸ್ಪತ್ರೆಯ ಆವರಣದಲ್ಲಿ ಕೊನೆಗೊಂಡಿತು. ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಬೆಳಗಿನ ಜಾವದ ಚುಮುಚುಮು ಚಳಿಯನ್ನು ಲೆಕ್ಕಿಸದೆ ವಾಕಥಾನ್‌ನಲ್ಲಿ ಹೆಜ್ಜೆ ಹಾಕಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್‌.ಕೆ.ಶಹಪೂರವಾಡ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ.ರಂಗಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು