ಡಿ.ಕೆ ಶಿವಕುಮಾರ್ ವಿರುದ್ಧ ವಾರಂಟ್

ಸುಳ್ಯ: ಹಲವು ಬಾರಿ ಸಮನ್ಸ್ ಜಾರಿಗೊಳಿಸಿದ್ದರೂ ಸಾಕ್ಷಿ ಹೇಳಲು ಹಾಜರಾಗದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಇಲ್ಲಿನ ನ್ಯಾಯಾಲ ಯವು ಮಂಗಳ ವಾರ ವಾರಂಟ್ ಜಾರಿ ಮಾಡಿದೆ.
ಬೆಳ್ಳಾರೆಯ ವರ್ತಕರ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ ರೈ ಅವರು, ಆಗ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ 2016ರ ಫೆ. 28ರಂದು ರಾತ್ರಿ ದೂರವಾಣಿ ಕರೆ ಮಾಡಿ, ನಿರಂತರವಾಗಿ ಎದುರಾಗುತ್ತಿರುವ ವಿದ್ಯುತ್ ಸಮಸ್ಯೆ ಬಗ್ಗೆ ದೂರಿದ್ದರು. ಆಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಈ ಕುರಿತು ಶಿವಕುಮಾರ್ ಅವರು, ಮೆಸ್ಕಾಂ ಎಂ.ಡಿ ಹಾಗೂ ಸುಳ್ಯ ಕಚೇರಿಯ ಅಂದಿನ ಪ್ರಭಾರ ಎಇಇ ಹರೀಶ್ ನಾಯ್ಕ್ ಮೂಲಕ ಸಾಯಿ ಗಿರಿಧರ ವಿರುದ್ಧ ಸುಳ್ಯ ಠಾಣೆಗೆ ದೂರು ನೀಡಿದ್ದರು. ಬಳಿಕ ಗಿರಿಧರ ರೈ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಸಾಕ್ಷಿಯಾಗಿದ್ದು, ಸಾ ಕ್ಷಿ ಹೇಳಲು ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಇದನ್ನು ಗಂಭೀರ
ವಾಗಿ ಪರಿಗಣಿಸಿರುವ ನ್ಯಾಯಾಧೀಶರು, ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಐಜಿಪಿ ಮತ್ತು ಡಿಐಜಿಗೂ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದ್ದಾರೆ. ಮುಂದಿನ ವಿಚಾರಣೆ ಸೆ. 29ರಂದು ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.