ಹೊಸಪೇಟೆ (ವಿಜಯನಗರ): ನಗರದ ರಾಣಿಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮಂಗಳವಾರ ಸಂಜೆ ಮೃತಪಟ್ಟಿದ್ದು, 54 ಜನ ಅಸ್ವಸ್ಥರಾಗಿದ್ದಾರೆ.

ರಾಣಿಪೇಟೆಯ 12ನೇ ಕ್ರಾಸ್ ನಿವಾಸಿ ಲಕ್ಷ್ಮೀದೇವಿ (50) ಮೃತ ಮಹಿಳೆ. ಅವರ ಮನೆಯ 11 ತಿಂಗಳ ಮಗು, ಇನ್ನೊಬ್ಬರು ಕೂಡ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಲಕ್ಷ್ಮಿದೇವಿ ಅವರು ಮಂಗಳವಾರ ಎಂಟರಿಂದ ಹತ್ತು ಸಲ ವಾಂತಿ ಭೇದಿ ಮಾಡಿಕೊಂಡಿದ್ದಾರೆ. ಆರೋಗ್ಯ ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲಾ ಗುವಂತೆ ತಿಳಿಸಿದ್ದರು. ಆದರೆ, ಅವರು ಆರ್‌ಎಂಪಿ ವೈದ್ಯರ ಬಳಿ ಚಿಕಿತ್ಸೆ ಪಡೆದು, ಮನೆಯಲ್ಲೇ ಗ್ಲುಕೋಸ್ ಹಾಕಿಸಿಕೊಂಡಿದ್ದಾರೆ. ಸಂಜೆ ಮೃತಪಟ್ಟಿದ್ದಾರೆ’ ಎಂದು ಪ್ರಭಾರ ಡಿಎಚ್‌ಒ ಡಾ.ಶಂಕರ ನಾಯಕ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.