ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ತೀವ್ರ ಜಲಕ್ಷಾಮ: ವರದಿ ಎಚ್ಚರಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತೀವ್ರ ನೀರಿನ ತೊಂದರೆ ಸಂಭವ
Last Updated 17 ಮಾರ್ಚ್ 2023, 6:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 17 ಜಿಲ್ಲೆಗಳು ತೀವ್ರವಾದ ನೀರಿನ ತೊಂದರೆ ಅನುಭವಿಸಲಿವೆ ಎಂದು ‍ಪರಿಸರ ನಿರ್ವಹಣೆ ಹಾಗೂ ನೀತಿ ಸಂಶೋಧನೆ ಸಂಸ್ಥೆ ಎಚ್ಚರಿಕೆ ನೀಡಿದೆ.

‘ಪ್ರಜಾವಾಣಿ‘ಯ ಸೋದರ ಸಂಸ್ಥೆ ‘ಡೆಕ್ಕನ್‌ ಹೆರಾಲ್ಡ್‌‘ ಈ ವರದಿ ಮಾಡಿದೆ.

ಸಂಶೋಧರು ಜಿಲ್ಲಾ ಮಟ್ಟದ ಸರ್ಕಾರಿ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ್ದು, 20 ಅಂಶಗಳನ್ನು ಆಧಾರವಾಗಿಟ್ಟುಕೊಂಡು ಈ ವರದಿ ತಯಾರಿ ಮಾಡಿದ್ದಾರೆ.

ಅಂತರ್ಜಲ ಲಭ್ಯತೆ, ಕಾಡು ಪ್ರದೇಶ, ಜನಸಾಂದ್ರತೆ, ದಿನ ಬಳಕೆಗೆ ನೀರಿನ ಬೇಡಿಕೆ, ಕೃಷಿ, ಜಾನುವಾರು ಹಾಗೂ ಕಾರ್ಖಾನೆ ಮುಂತಾದ ಅಂಶಗಳು ಹಾಗೂ ಸರಾಸರಿ ವಾರ್ಷಿಕ ಮಳೆ ಮತ್ತು ಹಲವು ದಶಕಗಳ ಉಷ್ಣಾಂಶಗಳನ್ನೆಲ್ಲ ಗಣನೆಗೆ ತೆಗೆದುಕೊಳ್ಳಲಾಗಿದೆ.

‘Mapping Climate Change Vulnerability: An assessment of water resources sector across different districts of Karnataka’ ಎನ್ನುವ ವರದಿಯಲ್ಲಿ ಈ ಉಲ್ಲೇಖ ಇದ್ದು, ಭವಿಷ್ಯದಲ್ಲಿ ಭಾರೀ ಜಲಕ್ಷಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಭಾರೀ ಜಲಕ್ಷಾಮ ಎದುರಿಸಲಿರುವ ಜಿಲ್ಲೆಗಳ ಪೈಕಿ ಬೆಂಗಳೂರು ಗ್ರಾಮಾಂತರ ಮೊದಲ ಸ್ಥಾನದಲ್ಲಿ ಇದ್ದು, ರಾಯಚೂರು. ಚಿಕ್ಕಬಳ್ಳಾಪುರ, ಕಲಬುರಗಿ, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ, ಬೀದರ್‌ ಹಾಗೂ ಬೆಳಗಾವಿ ಇದೆ.

ಬೆಂಗಳೂರು 12ನೇ ಸ್ಥಾನದಲ್ಲಿದೆ.

ನಂತರದ ಸ್ಥಾನದಲ್ಲಿ ಕೋಲಾರ, ಬಾಗಲಕೋಟೆ, ದಾವಣಗೆರೆ, ಯಾದಗಿರಿ, ಚಿತ್ರದುರ್ಗ ಹಾಗೂ ತುಮಕೂರು ಇವೆ. ಇವುಗಳು ಭಾರೀ ಪ್ರಮಾಣದ ಜಲಕ್ಷಾಮ ಎದುರಿಸಲಿದೆ.

ನೀರಿನ ಕೊರತೆ ಕಡಿಮೆ ಅನುಭವಿಸುವ ಜಿಲ್ಲೆಗಳ ಪೈಕಿ ಉಡುಪಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಕ್ರಮವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿವೆ. ಉಳಿದ ಜಿಲ್ಲೆಗಳು ಭಾಗಶಃ ತೊಂದರೆ ಅನುಭವಿಸಲಿದೆ ಎನ್ನುವುದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಹವಾಮಾನ ಬದಲಾವಣೆ ಇವೆಲ್ಲವನ್ನೂ ಬದಲಾಯಿಸಲಿದೆ ಎಂದು ವರದಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT