ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

Last Updated 6 ಆಗಸ್ಟ್ 2020, 13:02 IST
ಅಕ್ಷರ ಗಾತ್ರ

ಬೆಳಗಾವಿ: ಸವದತ್ತಿ ತಾಲ್ಲೂಕಿನ ನವಿಲುತೀರ್ಥ (ಮಲಪ್ರಭಾ) ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

‘ಜಲಾಶಯದ ಸಾಮರ್ಥ್ಯ 2079.50 ಅಡಿ. ಸದ್ಯ 2066.70 ಅಡಿ ಭರ್ತಿಯಾಗಿದೆ. 48,821 ಕ್ಯುಸೆಕ್ ಒಳಹರಿವಿದೆ. ಕೆಲವೇ ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. ಹೀಗಾಗಿ, ಒಳಹರಿವಿನ ಪ್ರಮಾಣ ಆಧರಿಸಿ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದಲ್ಲಿರುವವರು ಮುಂಜಾಗ್ರತಾ ಕ್ರಮವಾಗಿ ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT