ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಮೇಯರ್‌ ಆಯ್ಕೆ, ನಾವು ಮಾತಿಗೆ ಬದ್ಧ: ಡಿ.ಕೆ. ಶಿವಕುಮಾರ್‌

Last Updated 24 ಫೆಬ್ರುವರಿ 2021, 10:01 IST
ಅಕ್ಷರ ಗಾತ್ರ

ಬೆಂಗಳೂರು: ‘ಮೈಸೂರು ಮಹಾನಗರಪಾಲಿಕೆಯ ಮೇಯರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಪ್ಪಂದ ಆಗಿದೆ. ಕಾಂಗ್ರೆಸ್‌ಗೆ ಎರಡು ವರ್ಷ ಹಾಗೂ ಜೆಡಿಎಸ್‌ಗೆ ಮೂರು ವರ್ಷ ಮೇಯರ್ ಸ್ಥಾನ ಎಂದು ನಿರ್ಧರಿಸಲಾಗಿತ್ತು. ಆ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿದೆ ಎಂದು ನಾವು ಭಾವಿಸಿದ್ದೇವೆ. ನಾವು ನಮ್ಮ ಮಾತಿಗೆ ಬದ್ಧರಾಗಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಮೈತ್ರಿ ಮುರಿಯುವ ವಿಚಾರವಾಗಿ ಯಾರು ಏನು ಹೇಳಿದ್ದಾರೆ, ಏನು ಮಾಡಿದ್ದಾರೆ ಎಂಬುದನ್ನು ನಾನು ಪ್ರತ್ಯಕ್ಷವಾಗಿ ನೋಡಿ ತಿಳಿಯುವವರೆಗೂ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.

‘ನಾನು ಯಾರ ಜತೆ ಬೇಕಾದರೂ ಮಾತನಾಡುತ್ತೇನೆ. ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ಅದಕ್ಕಾಗಿ ಯಾರ ಜೊತೆ ಬೇಕಾದರೂ ಮಾತನಾಡುತ್ತೇನೆ. ಯಾರೂ ಕೂಡ ನನ್ನ ಮೇಲೆ ನಿರ್ಬಂಧ ಹೇರಿಲ್ಲ. ನಮಗೆ ಪಕ್ಷದ ತತ್ವ, ನಿಲುವು ಮುಖ್ಯ’ ಎಂದರು.

‘ಹೊಸಕೋಟೆಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ನಮ್ಮ ಪಕ್ಷಕ್ಕೆ ಸಹ ಸದಸ್ಯರಾಗಿ ಕೆಲಸ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು, ರಾಜಕೀಯ ಪಕ್ಷ ಸೇರಲು ಸಾಧ್ಯವಿಲ್ಲ. ಪಕ್ಷೇತರ ಅಭ್ಯರ್ಥಿಯು ಸಿದ್ಧಾಂತದ ಆಧಾರದ ಮೇಲೆ ಸಹ ಸದಸ್ಯನಾಗಿ ಒಂದು ಪಕ್ಷಕ್ಕೆ ಬೆಂಬಲ ನೀಡಬಹುದು. ಅವರ ಕಾರ್ಯಕರ್ತರು ಪಕ್ಷ ಸೇರಬಹುದು’ ಎಂದರು.

ಚಿಕ್ಕಬಳ್ಳಾಪುರ ಸ್ಫೋಟ: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದ ಸ್ಥಳಕ್ಕೆ ನಮ್ಮ ಪಕ್ಷದ ನಾಯಕ, ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಮಂಗಳವಾರ ಭೇಟಿ ನೀಡಿದ್ದಾರೆ. ವಿಧಾನಪರಿಷತ್ ವಿರೋಧ ಪಕ್ಷದ ನಾಯಕರೂ ಕೂಡ ಭೇಟಿ ನೀಡಲಿದ್ದಾರೆ’ ಎಂದರು.

ಪಾದಯಾತ್ರೆ: ರಾಜ್ಯದಲ್ಲಿ ಪಾದಯಾತ್ರೆ ವಿಚಾರವಾಗಿ ಗುರುವಾರ ಸಭೆ ನಡೆಸಲಿದ್ದು, ಸಭೆ ನಂತರ ಈ ಬಗ್ಗೆ ಪ್ರತಿಕ್ರಿಯಿಸುತ್ತೇನೆ’ ಎಂದೂ ಶಿವಕುಮಾರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT