ಶನಿವಾರ, ಮೇ 8, 2021
18 °C

ಬಸವಕಲ್ಯಾಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾವು ಬದ್ಧ: ಬಸವರಾಜ್ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ನಾವೆಲ್ಲ ಸಂಘಟಿತರಾಗಿ ಹೋರಾಟ ಮಾಡಿದೆವು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟರು. ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಾವು ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೆವು. ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ನಾನು, ಡಿಸಿಎಂ ಲಕ್ಷ್ಮಣ ಸವದಿ, ವಸತಿ ಸಚಿವರಾದ ವಿ. ಸೋಮಣ್ಣ ಹಾಗೂ ಬೀದರ್ ಕ್ಷೇತ್ರದ ಸಂಸದರಾದ ಭಗವಂತ ಖುಬಾ ಸಮನಾಗಿ ಹಂಚಿಕೊಂಡು ಪ್ರಾಮಾಣಿಕವಾಗಿ ನಿರ್ವಹಿಸಿದೆವು. ಜನ ಅಭಿವೃದ್ಧಿಗಾಗಿ ಮತ ಕೊಟ್ಟಿದ್ದಾರೆ ಎಂದಿದ್ದಾರೆ.

ಬಸವಕಲ್ಯಾಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ.  ಬಿಜೆಪಿಯನ್ನು ಗೆಲ್ಲಿಸಿದ ಬಸವಕಲ್ಯಾಣ ಕ್ಷೇತ್ರದ ಜನತೆಗೆ, ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು