ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ಇಲ್ಲ: ಅಶ್ವತ್ಥನಾರಾಯಣ

Last Updated 17 ಫೆಬ್ರುವರಿ 2022, 10:37 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರದ ವತಿಯಿಂದ ಹೊಸ ಎಂಜಿನಿಯರಿಂಗ್‌ ಕಾಲೇಜುಗಳನ್ನು ಸ್ಥಾಪಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರು ವಿಧಾನಸಭೆಯಲ್ಲಿ ಗುರುವಾರ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಭೂಸನೂರು ರಮೇಶ್‌ ಅವರ ಪ್ರಶ್ನೆಗೆ ಉತ್ತರಿಸಿ ಈ ವಿಷಯ ಹೇಳಿದರು.

ರಾಜ್ಯದಲ್ಲಿ ಈಗಾಗಲೇ ಇರುವ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸಾಕಷ್ಟು ಕೋರ್ಸ್‌ಗಳಲ್ಲಿ ಶೇ 50 ರಿಂದ ಶೇ 70 ರಷ್ಟು ಸೀಟುಗಳು ಭರ್ತಿಯಾಗುತ್ತಿಲ್ಲ. ಆದ್ದರಿಂದ ಹೊಸ ಎಂಜಿನಿಯರಿಂಗ್‌ ಕಾಲೇಜುಗಳನ್ನು ಆರಂಭಿಸುವ ಪ್ರಶ್ನೆಯೇ ಇಲ್ಲ ಎಂದರು.

ಎಐಸಿಟಿಇ ನಿಯಮಗಳ ಪ್ರಕಾರ ಈಗಾಗಲೇ ರಾಜ್ಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಮೂಲಭೂತ ಸೌಕರ್ಯವನ್ನು ಒದಗಿಸಲು ಒತ್ತು ನೀಡಲಾಗುತ್ತಿದೆ. ಈ ಎಂಜಿನಿಯರಿಂಗ್‌ ಕಾಲೇಜುಗಳನ್ನು ಬಲವರ್ಧಿಸಲು ಉದ್ದೇಶಿಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT