ಶನಿವಾರ, ಅಕ್ಟೋಬರ್ 1, 2022
20 °C

ವಿದ್ಯಾರ್ಥಿಗಳಿಗಾಗಿ ಉಕ್ರೇನ್ ಸರ್ಕಾರದ ಜೊತೆ ನಿರಂತರ ಸಂಪರ್ಕ: ವಿದೇಶಾಂಗ ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಯುದ್ಧದ ಕಾರಣಕ್ಕೆ ಉಕ್ರೇನ್ ತೊರೆದು ಭಾರತಕ್ಕೆ ವಾಪಸ್ ಆಗಿರುವ ವಿದ್ಯಾರ್ಥಿಗಳ ವಿಚಾರದಲ್ಲಿ ಭಾರತವು ಅಲ್ಲಿನ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿ ಇದೆ ಎಂದು ವಿದೇಶಾಂಗ ಸಚಿವ ಎಸ್.  ಜೈಶಂಕರ್ ತಿಳಿಸಿದರು.

ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಉಳಿದವರೆಲ್ಲರನ್ನೂ ದೇಶಕ್ಕೆ ವಾಪಸ್ ಕರೆತಂದಿದ್ದೇವೆ. ಸದ್ಯ ಉಕ್ರೇನ್ ಈ ವಿದ್ಯಾರ್ಥಿಗಳನ್ನು ವಾಪಸ್ ಕರೆಯಿಸಿಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ತರಗತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಉಕ್ರೇನ್ ಸರ್ಕಾರ ಹೇಳುತ್ತಿದೆ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉಕ್ರೇನ್ ನಿಂದ ವಾಪಸ್ ಆದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಓದು ಮುಂದುವರಿಸಲು ಅವಕಾಶ ನೀಡುವ ವಿಚಾರವನ್ನು ಸರ್ಕಾರ ಪರಿಶೀಲಿಸುತ್ತಿದೆ. ಈ  ವಿಚಾರದಲ್ಲಿ ಕೆಲವರು ಮೆಟ್ಟಿಲು ಏರಿದ್ದಾರೆ ಎಂದರು.

ಅಮೆರಿಕಾದಲ್ಲಿ ಭಾರತ ಮೂಲದ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ಕುರಿತು ಪ್ರತಿಕ್ರಿಯಿಸಿ' ಇದು ಆತಂಕಕಾರಿ ವಿಚಾರ. ಸದ್ಯ ಪ್ರವಾಸದಲ್ಲಿ‌ ಇರುವ ಕಾರಣ ಈ ಬಗ್ಗೆ ವಿವರ ಪಡೆದಿಲ್ಲ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು