ಸೋಮವಾರ, ಅಕ್ಟೋಬರ್ 25, 2021
25 °C

ಮುಖ್ಯಮಂತ್ರಿಯಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ: ವಿ.ಆರ್.ಸುದರ್ಶನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸಂವೇದನಾಶೀಲ ಮುಖ್ಯಮಂತ್ರಿ ಎನಿಸಿಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರಿಂದ  ನವದೆಹಲಿಯ ರೈತರ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಿತ ಎಂಬ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಸಹ ಅಧ್ಯಕ್ಷ ವಿ.ಆರ್.ಸುದರ್ಶನ್ ತಿಳಿಸಿದರು.

ರೈತರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಹಾಗಿದ್ದರೆ ಇವರು ರೈತರ ಪರವಾಗಿ ಹೋರಾಟ ಮಾಡೇ ಇಲ್ಲವೇ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಬಿ.ಎಸ್‌.ಯಡಿಯೂರಪ್ಪ ಅವರು ರೈತರ ಪರ ಹೋರಾಡಿದವರು ಎನಿಸಿಕೊಂಡಿದ್ದಾರೆ. ಇವರ ಆಶೀರ್ವಾದ ಪಡೆದು ಮುಖ್ಯಮಂತ್ರಿ ಆದ ಬಸವರಾಜ ಬೊಮ್ಮಾಯಿ ರೈತರ ಹೋರಾಟ ಕುರಿತು ನೀಡಿದ ಹೇಳಿಕೆ ಗೌರವ ತರುವಂತದ್ದಲ್ಲ ಎಂದರು.
ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ಅವಧಿಪೂರ್ವ ಚುನಾವಣೆ ಬರುವ ಸಾಧ್ಯತೆ ಇದೆ. ಅದಕ್ಕಾಗಿ ಕಾಂಗ್ರೆಸ್ ತಕ್ಕ ಸಿದ್ದತೆ ನಡೆಸಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು