ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟ ಖಾತೆ ನಿಭಾಯಿಸಬೇಕು: ಬಿ.ಸಿ. ಪಾಟೀಲ

Last Updated 9 ಆಗಸ್ಟ್ 2021, 17:24 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊಟ್ಟಿರುವ ಖಾತೆಯನ್ನು ನಿಭಾಯಿಸಬೇಕು. ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಸಚಿವರಾದ ಆನಂದ್‌ ಸಿಂಗ್‌ ಮತ್ತು ಎಂ.ಟಿ.ಬಿ. ನಾಗರಾಜ್‌ ಅಸಮಾಧಾನ ಹೊರಹಾಕಿರುವ ಕುರಿತು ಸೋಮವಾರ ವಿಕಾಸಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ‘ಕೆಲವರು ತಮಗೆ ಇಂತಹದ್ದೇ ಖಾತೆ ಬೇಕು ಎಂದು ಬಯಸಿರುತ್ತಾರೆ. ಅದು ಸಿಗದೇ ಇದ್ದಾಗ ಅಸಮಾಧಾನ ಸಹಜ. ಆದರೆ, ಕೊಟ್ಟಿರುವ ಖಾತೆಯಲ್ಲಿ ಕೆಲಸ ಮಾಡುವುದು ಅನಿವಾರ್ಯ’ ಎಂದರು.

‘ಬಿಜೆಪಿಯಲ್ಲಿ 105 ಶಾಸಕರು ಇದ್ದ ಕಾರಣದಿಂದಲೇ ನಾವು ಸಚಿವರಾಗಿರುವುದು’ ಎಂಬ ಸಚಿವ ಮುನಿರತ್ನ ಹೇಳಿಕೆಗೆ ಕುರಿತ ಪ್ರಶ್ನೆಗೆ, ‘ಬಿಜೆಪಿಯಲ್ಲಿ ಮೊದಲು ಇದ್ದ 105 ಶಾಸಕರು ಮತ್ತು ನಾವು 17 ಜನರು ಸೇರಿದ್ದರಿಂದಲೇ ಸರ್ಕಾರ ರಚನೆ ಆಗಿರುವುದು. 105 ಮತ್ತು 17 ಎರಡೂ ಕಡೆಯವರೂ ಮುಖ್ಯ’ ಎಂದರು.

‘ಸಚಿವರು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ’ ಎಂಬ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ಟೀಕೆಗೆ, ‘ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಗುಂಪು ಸೇರಬೇಡಿ, ಮಾಸ್ಕ್ ಧರಿಸಿ ಎಂದು ನಾವು ಹೇಳುತ್ತೇವೆ. ಆದರೂ ಜನರು ಗುಂಪು ಸೇರುತ್ತಾರೆ. ನಾವು ಏನು ಮಾಡಲು ಸಾಧ್ಯ’ ಎಂದು ಮರು ಪ್ರಶ್ನೆ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT