ಗುರುವಾರ , ಮಾರ್ಚ್ 23, 2023
32 °C
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ

ಕೋವಿಡ್‌ನಿಂದ ಮೃತರಾದವರ ಮನೆಗಳಿಗೆ ಬಿಜೆಪಿ ವತಿಯಿಂದ ಭೇಟಿ: ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ರಾಜ್ಯದಲ್ಲಿ ಕೋವಿಡ್‌ನಿಂದ ಮೃತಪಟ್ಟ ಎಲ್ಲರ ಮನೆಗಳಿಗೆ ಪಕ್ಷದ ವತಿಯಿಂದ ಭೇಟಿ ನೀಡುವ ಬಗ್ಗೆ ಯೋಚನೆ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ಪಕ್ಷದ ಪದಾಧಿಕಾರಿಗಳು ಮೃತಪಟ್ಟವರ ಕುಟುಂಬಗಳನ್ನು ಗುರುತಿಸಿ ಸಾಂತ್ವನ ಹೇಳುವ ಜೊತೆಗೆ ಅವರ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ' ಎಂದರು.

ಭಿನ್ನಾಭಿಪ್ರಾಯ ಇಲ್ಲ: ರಾಜ್ಯ ಬಿಜೆಪಿಯಲ್ಲಿ ನಾಯಕರ್ವದ ಬಗ್ಗೆ ಎಲ್ಲಿಯೂ ಭಿನ್ನಾಭಿಪ್ರಾಯ ಇಲ್ಲ. ಇನ್ನೂ ಎರಡು ವರ್ಷ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕಟೀಲ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು