ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ವಿವಾದ | ರಾಜ್ಯದ ಒಂದಿಂಚೂ ಜಾಗ ಬಿಟ್ಟುಕೊಡೆವು: ಮುಖ್ಯಮಂತ್ರಿ ಬೊಮ್ಮಾಯಿ 

Last Updated 26 ನವೆಂಬರ್ 2022, 1:15 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಗಡಿ ರಕ್ಷಣೆಗೆ ಸರ್ಕಾರ ಶಕ್ತಿ ಮೀರಿ ಶ್ರಮಿಸಲಿದೆ. ಎಂತಹ ಸ್ಥಿತಿಯಲ್ಲೂ ಒಂದಿಂಚೂ ಜಾಗ ಬಿಟ್ಟುಕೊಡುವುದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶುಕ್ರವಾರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನ್ಯಾಯ ನಮ್ಮ ಕಡೆ ಇದೆ. ಎರಡೂ ರಾಜ್ಯಗಳ ಮಧ್ಯೆ ಶಾಂತಿ ರಕ್ಷಣೆಗೆ ಮಹಾರಾಷ್ಟ್ರ ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಭಾರತ ರಾಜ್ಯಗಳ ಒಕ್ಕೂಟ. ಪ್ರತಿ ರಾಜ್ಯಕ್ಕೂ ತನ್ನದೇ ಆದ ಹಕ್ಕುಗಳಿವೆ. ನೆಲ, ಜಲ, ಗಡಿ ಸಮಸ್ಯೆಗಳು ಎದುರಾ ದಾಗ ಕಾನೂನಿನ ಅನ್ವಯ ನಡೆದುಕೊಳ್ಳಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯಗಳ ಕರ್ತವ್ಯ. ನೆರೆಯ ರಾಜ್ಯಗಳು ಶಾಂತಿ ಕಾಯ್ದುಕೊಳ್ಳಬೇಕು ಎಂದರು.

‘ಮರುವಿಂಗಡಣಾ ಕಾಯ್ದೆ ಯಡಿ ನೀಡಲಾದ ಹಕ್ಕುಗಳ ವ್ಯಾಪ್ತಿ ಯಲ್ಲೇಕರ್ನಾಟಕ ಕಾರ್ಯನಿರ್ವಹಿಸುತ್ತಿದೆ. ಮಹಾರಾಷ್ಟ್ರ 2004ರಲ್ಲಿ ಪ್ರಕರಣ ದಾಖಲಿಸಿತ್ತು. ನಾವು ನ್ಯಾಯಾಲಯದಲ್ಲಿ ಹೋರಾಡುತ್ತಿದ್ದೇವೆ.ಕಾನೂನು ಹೋರಾಟಕ್ಕೆ ಮೊದಲ ಆದ್ಯತೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವಿದೆ. ತೀರ್ಪಿಗೆ ಕಾಯಬೇಕು’ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ, ‘ಸುಪ್ರೀಂ ಕೋರ್ಟ್‌ನಲ್ಲಿರುವ ಪ್ರಕರಣದಲ್ಲಿ ರಾಜ್ಯದ ಪರ ಬಹಳ ಗಟ್ಟಿಯಾದ ಕಾನೂನು ನೆಲೆಗಟ್ಟಿದೆ. ಸಂವಿಧಾನದ ಕಲಂ 3ರಲ್ಲೂ ಅದನ್ನೇ ಹೇಳಲಾಗಿದೆ. 2004 ರಲ್ಲಿ ಪ್ರಕರಣ ದಾಖಲು ಮಾಡಿದಾಗಿನಿಂದ ಈವರೆಗೆ ಪ್ರಕರಣವನ್ನು ಪರಿಗಣಿಸಬೇಕೆ ಎಂಬ ಬಗ್ಗೆಯೇ ತೀರ್ಮಾನವಾಗಿಲ್ಲ. ಪ್ರಕರಣವನ್ನು ಪರಿಗಣಿಸಬಾರದು ಎಂದು ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ ನಾವು ವಾದ ವನ್ನು ಮಂಡಿಸಿದ್ದೇವೆ. ಅದನ್ನೇ ಪ್ರಬಲ ವಾಗಿ ವಾದಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT