ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸಿಬಿ ರದ್ದು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲ್ಲ: ಬಸವರಾಜ ಬೊಮ್ಮಾಯಿ

ಸಚಿವ ಸಂಪುಟದಲ್ಲಿಯೇ ತೀರ್ಮಾನ* ಹೈಕೋರ್ಟ್‌ ಆದೇಶ ಅನುಷ್ಠಾನ
Last Updated 23 ಆಗಸ್ಟ್ 2022, 20:38 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ (ಬೆಂ. ಗ್ರಾಮಾಂ ತರ): ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಗೊಳಿಸಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

‘ಹೈಕೋರ್ಟ್‌ ಆದೇಶದಂತೆ ಲೋಕಾಯುಕ್ತಕ್ಕೆ ಹಿಂದೆ ಇದ್ದ ಎಲ್ಲಾ ಅಧಿಕಾರ ನೀಡಲು ಸಿದ್ಧತೆ ನಡೆದಿದೆ. ಸಚಿವ ಸಂಪುಟದಲ್ಲಿಯೂ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ, ಮೇಲ್ಮನವಿ ಸಲ್ಲಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ’ ಎಂದು ಹೇಳಿದರು.

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಸಿಬಿ ರದ್ದುಗೊಳಿಸುವ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ಕುರಿತ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

‘ಈ ಮೇಲ್ಮನವಿಗೂ, ಸರ್ಕಾರಕ್ಕೂ ಸಂಬಂಧ ಇಲ್ಲ. ಎಸಿಬಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟ. ಲೋಕಾಯುಕ್ತ ಬಲಪಡಿಸುವ ಅಂಶ ಬಿಜೆಪಿ ಪ್ರಣಾಳಿಕೆಯಲ್ಲಿಯೂ ಇದೆ. ನಾವು ಅದೇ ನಿಲುವಿಗೆ ಬದ್ಧರಾಗಿದ್ದೇವೆ’ ಎಂದು ಹೇಳಿದರು.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಕನಕರಾಜು ಎಂಬುವರು ಮೇಲ್ಮನವಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದೆ.

‘ಹೈಕೋರ್ಟ್‌ ಆದೇಶದಿಂದ ತನಿಖಾ ಹಂತದಲ್ಲಿರುವ ಕ್ರಿಮಿನಲ್‌ ಪ್ರಕರಣಗಳ ಮೇಲೆ ಪರಿಣಾಮ ಬೀರಲಿದೆ ಮತ್ತು ಇತರ ಪ್ರಕರಣಗಳ ತನಿಖೆ ಸಹ ಸ್ಥಗಿತವಾಗುವ ಅಪಾಯ ಇದೆ. ಇದರಿಂದ ಆರೋಪಿಗಳು ಬಚಾವ್‌ ಆಗುವ ಸಾಧ್ಯತೆ ಇದೆ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT