ಗುರುವಾರ , ನವೆಂಬರ್ 26, 2020
21 °C

'ಲವ್ ಜಿಹಾದ್‌' ಮಟ್ಟ ಹಾಕಲು ಶೀಘ್ರವೇ ಕಾನೂನು: ಸಿ.ಟಿ.ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ

ಬೆಂಗಳೂರು: 'ಲವ್‌ ಜಿಹಾದ್' ಮಟ್ಟ ಹಾಕಲು ಮತ್ತು ಮದುವೆಗಾಗಿ ಮತಾಂತರ ನಡೆಸುವುದನ್ನು ತಡೆಯಲು ರಾಜ್ಯದಲ್ಲೂ ಶೀಘ್ರವೇ ಕಾನೂನು ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಟ್ವೀಟ್‌ ಮಾಡಿದ್ದಾರೆ.

ಮದುವೆಯಾಗುವ ಉದ್ದೇಶದಿಂದ ಮತಾಂತರ ಆಗುವಂತಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ನೀಡಿರುವ ತೀರ್ಪನ್ನು ಉಲ್ಲೇಖಿಸಿರುವ ಅವರು, ಜಿಹಾದಿ ಶಕ್ತಿಗಳು ನಮ್ಮ ಸಹೋದರಿಯರ ಘನತೆ, ಗೌರವ ಹರಣ ಮಾಡುವುದನ್ನು ಸುಮ್ಮನೆ ನೋಡುತ್ತಾ ಕೂರುವುದಿಲ್ಲ ಎಂದು ಹೇಳಿದ್ದಾರೆ.

ಯಾರೇ ಇರಲಿ ಮತಾಂತರದಂತಹ ಕೃತ್ಯದಲ್ಲಿ ತೊಡಗಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು