ಶುಕ್ರವಾರ, ಜುಲೈ 30, 2021
23 °C

ಮೇಕೆದಾಟು: ಎನ್‌ಜಿಟಿ ಆದೇಶ ಪ್ರಶ್ನಿಸಿ ಕಾನೂನು ಹೋರಾಟ– ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸಮಿತಿ ರಚಿಸಿರುವ ರಾಷ್ಟ್ರೀಯ ಹಸಿರು ಪೀಠದ (ಎನ್‌ಜಿಟಿ) ಆದೇಶವನ್ನು ಪ್ರಶ್ನಿಸುವ ಮೂಲಕ ಕಾನೂನು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ‘ಮೇಕೆದಾಟು ಯೋಜನೆ ಪ್ರದೇಶದ ವ್ಯಾಪ್ತಿಯ ಕಚ್ಚಾ ರಸ್ತೆಯ ಕುರಿತಂತೆ ತಮಿಳುನಾಡಿನ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿದೆ. ಅದನ್ನು ಮುಂದಿಟ್ಟುಕೊಂಡು ಎನ್‌ಜಿಟಿ ಸಮಿತಿ ರಚಿಸಿದೆ. ಇದು  ಸಮಂಜಸವಾದ ಕ್ರಮ‌ ಅಲ್ಲ’ ಎಂದರು,

‘ಈ ಆದೇಶವನ್ನು‘ಎನ್‌ಜಿಟಿ ಮುಂದೆಯೇ ಪ್ರಶ್ನಿಸಲು ನಾವು ನಿರ್ಧರಿಸಿದ್ದೇವೆ. ಆದೇಶವನ್ನು ಮರು ಪರಿಶೀಲಿಸುವಂತೆ ಮನವಿ ಮಾಡಲಾಗುವುದು’ ಎಂದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು