ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಎರಡು ದಿನ ಗುಡುಗು ಸಹಿತ ಮಳೆ

Last Updated 4 ಆಗಸ್ಟ್ 2022, 21:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಂದೆರಡು ಕಡೆಮುಂದಿನಎರಡುದಿನಗುಡುಗುಸಹಿತಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ಶುಕ್ರವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಹಾಸನ, ಶಿವಮೊಗ್ಗ, ಗದಗ, ಧಾರವಾಡ ಹಾಗೂ ಬೆಳಗಾವಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೀದರ್, ಕಲಬುರ್ಗಿ, ಬೆಂಗಳೂರು ನಗರ ಸೇರಿ 13 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯ ಎಲ್ಲ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಕೊಡಗುಹಾಗೂ ಶಿವಮೊಗ್ಗದಲ್ಲಿ ಶನಿವಾರದವರೆಗೆ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 50 ಕಿ.ಮೀ.ನಿಂದ 60 ಕಿ.ಮೀ. ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT