ಬೆಂಗಳೂರು: ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿಗಾಳಿಯ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ.
ಈ ಜಿಲ್ಲೆಗಳಲ್ಲಿ ಎರಡು ದಿನ ತಾಪಮಾನ ಸಾಮಾನ್ಯಕ್ಕಿಂತ 4ರಿಂದ 5 ಡಿಗ್ರಿ ಸೆಲ್ಸಿಯಸ್ ಏರಲಿದೆ. ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಎರಡು ದಿನಗಳಿಂದ ಕೊಂಚ ಇಳಿಕೆಯಾಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದೆ. ಜನರನ್ನು ಹೈರಾಣಾಗುವಂತೆ ಮಾಡಿದೆ. ಪಣಂಬೂರು ಹಾಗೂ ಹೊನ್ನಾವರದಲ್ಲಿ ಶುಕ್ರವಾರ ಗರಿಷ್ಠ ಉಷ್ಣಾಂಶ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬಾಗಲಕೋಟೆಯಲ್ಲಿ ಕನಿಷ್ಠ 12.2 ಡಿಗ್ರಿ ಸೆಲ್ಸಿಯಸ್ ತಾಪಮಾನ ಇತ್ತು. ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಕೆಲವು ಸ್ಥಳಗಳಲ್ಲಿ 30 ಕಿ.ಮೀ ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸಲಿದೆ ಎಂದೂ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯೂ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಕೇಂದ್ರದ ಮುಖ್ಯಸ್ಥ ಡಾ.ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.