ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 27ರ ಬಳಿಕ ಹೆಚ್ಚು ಮಳೆ ಸಾಧ್ಯತೆ

Last Updated 25 ಜೂನ್ 2021, 19:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂ.27ರಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಜೂ.30ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೂರು ದಿನಗಳಿಂದ ಬಿಡುವು ಪಡೆದಿದ್ದ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದಿಂದ ಇದೇ 27ರಿಂದ 30ರವರೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುಡುಗು ಹೆಚ್ಚಾಗಿರಲಿದ್ದು, ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಗೋಕರ್ಣದಲ್ಲಿ 2 ಸೆಂ.ಮೀ ಹಾಗೂ ತೀರ್ಥಹಳ್ಳಿಯಲ್ಲಿ 1 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT