ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಂತ್ಯ ಕರ್ಫ್ಯೂ ಮುಖ್ಯಮಂತ್ರಿಯೊಬ್ಬರ ತೀರ್ಮಾನವಲ್ಲ: ಸಚಿವ ಎಸ್.ಟಿ.ಸೋಮಶೇಖರ್

Last Updated 20 ಜನವರಿ 2022, 8:05 IST
ಅಕ್ಷರ ಗಾತ್ರ

ಮೈಸೂರು: ‘ಕೋವಿಡ್‌ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಹೇರಿರುವುದು ಮುಖ್ಯಮಂತ್ರಿ ಒಬ್ಬರೇ ಕೈಗೊಂಡ ತೀರ್ಮಾನವಲ್ಲ. ತಜ್ಞರು ನೀಡಿದ ಮುನ್ನೆಚ್ಚರಿಕೆ, ಸಂಪುಟದ ಸಚಿವರ ಅಭಿಪ್ರಾಯ ಪಡೆದ ಬಳಿಕ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಮೈಸೂರಿನಲ್ಲಿ ಗುರುವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಸುವ ಸಂಬಂಧ ಮುಖ್ಯಮಂತ್ರಿ ಶುಕ್ರವಾರ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಕುರಿತು ಸಾರ್ವಜನಿಕರಿಂದ ಅಹವಾಲನ್ನು ಕೂಡ ಸ್ವೀಕರಿಸುತ್ತಿದ್ದಾರೆ’ ಎಂದರು.

‘ಕರ್ಫ್ಯೂ ಜಾರಿಗೊಳಿಸುವುದಾದರೆ ಲಸಿಕೆ ಏಕೆ ಬೇಕಿತ್ತು’ ಎಂದು ಸಂಸದ ಪ್ರತಾಪ ಸಿಂಹ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ, ‘ಸಾರ್ವಜನಿಕರ ಅಭಿಪ್ರಾಯ ಏನಿದೆಯೋ ಅದನ್ನು ಅವರು ವ್ಯಕ್ತಪಡಿಸಿದ್ದಾರೆ. ತಜ್ಞರು ನೀಡಿದ ವರದಿ ಆಧಾರದ ಮೇಲೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಜೊತೆಗೆ ಆಯಾ ಜಿಲ್ಲೆಯ ಪರಿಸ್ಥಿತಿ ನೋಡಿ ಜಿಲ್ಲಾಧಿಕಾರಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಲಾಗಿದೆ’ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ: ‘ಸಂಪುಟ ವಿಸ್ತರಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಮತ್ತು ಇತರ ಪದಾಧಿಕಾರಿಗಳ ಜತೆ ಸಭೆ ಮಾಡಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ. ಮುಖ್ಯಮಂತ್ರಿ ಅವರು ಎರಡು ತಿಂಗಳಿಗೊಮ್ಮೆ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸುವುದು ರೂಢಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT