ಶುಕ್ರವಾರ, ಜನವರಿ 22, 2021
19 °C

ಬಿಜೆಪಿ ರಾಜ್ಯ ಉಸ್ತುವಾರಿಗೆ ಸಂಭ್ರಮದ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬಿಜೆಪಿ ರಾಜ್ಯ ಉಸ್ತುವಾರಿಯಾದ ನಂತರ ಇದೇ ಮೊದಲ ಬಾರಿಗೆ ಶುಕ್ರವಾರ ನಗರಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರನ್ನು ಕಾರ್ಯಕರ್ತರು ಸಂಭ್ರಮದಿಂದ ಬರಮಾಡಿಕೊಂಡರು.

ಗೋವಾಗೆ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಶಾಸಕ ಅನಿಲ್ ಬೆನಕೆ ಸ್ವಾಗತಿಸಿಕೊಂಡರು. ಸಂಜೆ ನಗರ ಪ್ರವೇಶಿಸಿದ ಅವರನ್ನು ಪಕ್ಷದ ಕಾರ್ಯಕರ್ತರು ದ್ವಿಚಕ್ರ ವಾಹನಗಳ ಮೆರವಣಿಗೆ ಮೂಲಕ ಸಂಭ್ರಮದಿಂದ ಬರ ಮಾಡಿಕೊಂಡರು.

ಬಳಿಕ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅವರು ಭಾಗಿಯಾಗಿದ್ದರು. ಡಿ.5ರಂದು ನಡೆಯಲಿರುವ ರಾಜ್ಯ ಘಟಕದ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ನಗರದಾದ್ಯಂತ ‌ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು